Friday, March 29, 2024
spot_imgspot_img
spot_imgspot_img

ಉಜಿರೆ: ಕಲ್ಲಿದ್ದಲು ಸಾಗಾಟದ ಲಾರಿಯಲ್ಲಿ ಆಕಸ್ಮಿಕ ಬೆಂಕಿ; ಪೊಲೀಸರ ಸಮಯಪ್ರಜ್ಞೆಯಿಂದ ಲಾರಿಯೊಳಗೆ ನಿದ್ರಿಸುತ್ತಿದ್ದ ನಾಲ್ವರ ರಕ್ಷಣೆ!

- Advertisement -G L Acharya panikkar
- Advertisement -

ಉಜಿರೆ: ಕಲ್ಲಿದ್ದಲು ಸಾಗಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಗುರುವಾರ ತಡರಾತ್ರಿ ವೇಳೆ ಸಂಭವಿಸಿದೆ.

ಮಂಗಳೂರಿನಿಂದ ಹಾಸನ ಕಡೆಗೆ ಕಲ್ಲಿದ್ದಲು ಸಾಗಾಟ ಮಾಡುತ್ತಿದ್ದ ಲಾರಿಯನ್ನು ತಡರಾತ್ರಿ 2.30 ರ ಸುಮಾರಿಗೆ ಚಾರ್ಮಾಡಿ ಚೆಕ್ ಪೊಸ್ಟ್ ನಲ್ಲಿ ನಿಲ್ಲಿಸಿ, ಚಾಲಕ ಸೇರಿದಂತೆ ಇನ್ನೂ ಮೂವರು ಗಾಡಿಯೊಳಗೆ ನಿದ್ರಿಸುತ್ತಿದ್ದರು.

ಇದನ್ನೂ ಓದಿ: ಕೆರೆಗೆ ಉರುಳಿದ ಕೆಎಸ್‌ಆರ್‌ಟಿಸಿ ಬಸ್ಸು; ಇಬ್ಬರು ಮೃತಪಟ್ಟ ಶಂಕೆ

ಈ ವೇಳೆ ಲಾರಿಯಲ್ಲಿದ್ದ ಕಲ್ಲಿದ್ದಲಿನ ಅಡಿಭಾಗದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಧರ್ಮಸ್ಥಳ ಪೊಲೀಸರು ಗಮನಿಸಿ ಲಾರಿಯಲ್ಲಿದ್ದ ನಾಲ್ವರನ್ನೂ ರಕ್ಷಣೆ ಮಾಡಿ, ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ.

ಅಗ್ನಿಶಾಮಕದಳ ಹಾಗೂ ಧರ್ಮಸ್ಥಳ ಪೊಲೀಸರ ಸೂಕ್ತ ಕಾರ್ಯಾಚರಣೆಯಿಂದ ಬೆಂಕಿಯನ್ನು ನಂದಿಸಲಾಗಿದೆ. ಕಾರ್ಯಾಚರಣೆಯಲ್ಲಿ ಬೆಳ್ತಂಗಡಿ ಠಾಣಾಧಿಕಾರಿ ಎಂ.ಗೋಪಾಲ್,ಪ್ರಮುಖ ಅಗ್ನಿಶಾಮಕ ಕೃಷ್ಣ ನಾಯ್ಕ, ಚಾಲಕ ರತನ್, ಮಾರುತಿ ಟಿ.ಅರ್,ಚಾಕೋ.ಕೆ.ಜೆ, ವಿನೋದ್ ರವರು ಬೆಂಕಿ ನಂದಿಸುವ ಕಾರ್ಯದಲ್ಲಿ ಸಹಕರಿಸಿದರು.

- Advertisement -

Related news

error: Content is protected !!