Sunday, June 7, 2026
spot_imgspot_img
spot_imgspot_img

ಉಜಿರೆ: ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿ ಹೊಡೆದು ಪಾದಚಾರಿ ಮೃತ್ಯು..!

- Advertisement -
- Advertisement -

ಉಜಿರೆ: ರಸ್ತೆ ದಾಟುತ್ತಿದ್ದ ವೇಳೆ ಪಾದಚಾರಿಗೆ ಬೈಕ್ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡು ಪಾದಚಾರಿ ಸಾವನ್ನಪ್ಪಿದ ಘಟನೆ ಉಜಿರೆಯಲ್ಲಿ ನಡೆದಿದೆ.

ಮೃತಪಟ್ಟವರನ್ನು ಧರ್ಮಸ್ಥಳ ಗ್ರಾಮದ ದೊಂಡೋಲೆ ನಿವಾಸಿ ನಾರಾಯಣ ಪೂಜಾರಿ (65) ಎಂದು ಗುರುತಿಸಲಾಗಿದೆ.

ಎ.29 ರಂದು ನಾರಾಯಣ ಪೂಜಾರಿ ಅವರು ಉಜಿರೆ ಪೇಟೆಯಲ್ಲಿ ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಬೈಕ್ ಅವರಿಗೆ ಡಿಕ್ಕಿ ಹೊಡೆದಿದೆ. ಹೊಡೆತದ ರಭಸಕ್ಕೆ ರಸ್ತೆಗೆ ಬಿದ್ದ ನಾರಾಯಣ ಪೂಜಾರಿಯವರ ತಲೆಗೆ ಗಂಭೀರ ಗಾಯವಾಗಿದ್ದು, ಕೂಡಲೇ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಎ.29 ರಂದು ಸಂಜೆಯ ವೇಳೆ ಅವರು ಚಿಕಿತ್ಸೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಉಮೇಶ್ ನಾಯ್ಕ ಪಾದಚಾರಿಗೆ ಡಿಕ್ಕಿ ಹೊಡೆದ ಬೈಕ್‌ ಸವಾರ. ಬೆಳ್ತಂಗಡಿ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!