Friday, April 19, 2024
spot_imgspot_img
spot_imgspot_img

ವಿಟ್ಲ: ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿ ತನುಜ್ ಶೆಣೈ ಬಿ.ಇ ಪರೀಕ್ಷೆಯಲ್ಲಿ 6ನೇ ರ‍್ಯಾಂಕ್

- Advertisement -G L Acharya panikkar
- Advertisement -

ವಿಟ್ಲ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನ ಇಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ (ಇಇಇ) ವಿಭಾಗದ ವಿದ್ಯಾರ್ಥಿ ತನುಜ್ ಶೆಣೈ 2020ನೇ ಸಾಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (ವಿ.ಟಿ.ಯು) ಬಿ.ಇ. ಪರೀಕ್ಷೆಯಲ್ಲಿ ಆರನೇ ರ‍್ಯಾಂಕ್ ಪಡೆದಿದ್ದಾರೆ.


ತಂದೆ ವಿಟ್ಲ ನಿವಾಸಿಗಳಾಗಿರುವ ತುಳಸಿದಾಸ್ ಶೆಣೈ ಮತ್ತು ತಾಯಿ ಜ್ಯೋತಿ ಶೆಣೈ ಅವರ ಸುಪುತ್ರರಾಗಿದ್ದಾರೆ. ಬೆಂಗಳೂರಿನ Accord Global Technology Solution Private Ltd ಕಂಪನಿಯ ಉದ್ಯೋಗಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.


ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ವಿದ್ಯಾರ್ಥಿಯ ಸಾಧನೆಯನ್ನು ಕಂಡು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕಾರ್ಯದರ್ಶಿಗಳಾದ ಡಿ.ಹರ್ಷೇಂದ್ರ ಕುಮಾರ್ ಹಾಗೂ ಡಾ| ಬಿ. ಯಶೋವರ್ಮರವರು ಈ ಸಾಧನೆಯು ಇತರರಿಗೂ ಮಾದರಿಯಾಗಲಿ ಎಂದು ಶುಭಹಾರೈಸಿದರು. ಪ್ರಾಂಶುಪಾಲರಾದ ಡಾ| ಅಶೋಕ್ ಕುಮಾರ್, ಹಾಗೂ ಸಿಬ್ಬಂದಿಗಳೆಲ್ಲರೂ ಹರ್ಷ ವ್ಯಕ್ತಪಡಿಸಿದ್ದಾರೆ.

- Advertisement -

Related news

error: Content is protected !!