Friday, May 10, 2024
spot_imgspot_img
spot_imgspot_img

ಉಜಿರೆ: ಸೌಜನ್ಯ ಕೊಲೆ ಪ್ರಕರಣ- ಮರು ತನಿಖೆಗೆ ವಹಿಸಲು ಹೈಕೋರ್ಟ್‌ ನಿರಾಕಣೆ

- Advertisement -G L Acharya panikkar
- Advertisement -

ಬೆಳ್ತಂಗಡಿ:ಉಜಿರೆಯ ಎಸ್‌ಡಿಎಂ ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣವನ್ನು ಸಿಬಿಐಗೆ ಮರು ತನಿಖೆಗೆ ವಹಿಸಲು ಹೈಕೋರ್ಟ್‌ ನಿರಾಕರಿಸಿದೆ.

ಪ್ರಕರಣ ನಡೆದು ಅದಾಗಲೇ ಹಲವು ವರ್ಷ ಕಳೆದ ನಂತರ ಈಗ ಮತ್ತೆ ಸಿಬಿಐಗೆ ಮರು ತನಿಖೆಗೆ ವಹಿಸಬೇಕೆಂದು ಕೋರಿ ಸೌಜನ್ಯ ತಂದೆ ಚಂದಪ್ಪ ಗೌಡ ರವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಕೆ. ಸೋಮಶೇಖರ್‌ ರವರಿದ್ದ ಏಕಸದಸ್ಯ ನ್ಯಾಯಪೀಠ ವಜಾಗೊಳಿಸಿದೆ.

ಪ್ರಕರಣದಲ್ಲಿ ಧೀರಜ್‌ ಜೈನ್‌, ಉದಯ್‌ ಜೈನ್‌ ಹಾಗೂ ಮಲ್ಲಿಕ್‌ ಜೈನ್‌ ವಿರುದ್ಧ ಸಂಶಯ ವ್ಯಕ್ತಪಡಿಸಿ, ಅರ್ಜಿದಾರರು ಮರು ತನಿಖೆಗೆ ಕೋರಿದ್ದರು ಆದರೆ, ಸಂಶಯ ರುಜುವಾತುಪಡಿಸುವ ಸಾಕ್ಷ್ಯಗಳನ್ನು ಒದಗಿಸಲಾಗಲಿಲ್ಲ. ಈ ಕಾರಣಕ್ಕೆ ಅರ್ಜಿಯನ್ನು ವಜಾ ಗೊಳಿಸಲಾಗಿದೆ.

ಈ ಪ್ರಕರಣದಲ್ಲಿ ಸಂತೋಷ್‌ ರಾವ್‌ ವಿರುದ್ಧ ಸಿಬಿಐ ಚಾರ್ಜ್‌ಶೀಟ್ ಸಲ್ಲಿಸಿದೆ. ವೈದ್ಯಕೀಯ ಪರೀಕ್ಷೆಯಲ್ಲಿ ಸಂತೋಷ್‌ ರಾವ್‌ ಕೃತ್ಯ ಎಸಗಿರುವುದು ದೃಢಪಟ್ಟಿದೆ. ಈ ಬಗ್ಗೆ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ಸಾಕ್ಷಿಗಳ ವಿಚಾರಣೆ ನಡೆಯುತ್ತಿದೆ.

- Advertisement -

Related news

error: Content is protected !!