- Advertisement -
- Advertisement -



ಉಳ್ಳಾಲ: ಸೋಮೇಶ್ವರದ ಯುವಕನೊಬ್ಬ ವಿದೇಶದಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಸೋಮೇಶ್ವರ ನಿವಾಸಿಗಳಾದ ಚಂದ್ರ ಮತ್ತು ದೀಪಾ ದಂಪತಿಯ ಪುತ್ರ ಪುನೀತ್ ಪೂಜಾರಿ(32) ಮೃತ ಯುವಕ.
ಕಳೆದ ಒಂದೂವರೆ ವರ್ಷಗಳಿಂದ ಒಮನ್ ದೇಶದಲ್ಲಿ ಕೆಲಸ ಮಾಡುತ್ತಿದ್ದು, ಸುಮಾರು ಒಂದೂವರೆ ತಿಂಗಳ ಹಿಂದೆ ಊರಿಗೆ ಬಂದು ಮರಳಿ ಒಮಾನ್ ಗೆ ಹಿಂತಿರುಗಿದ್ದರು. , ಪುನೀತ್ ಕಳೆದ ನಾಲ್ಕು ವರ್ಷಗಳಿಂದ ಉರ್ವಾದ ಯುವತಿಯೋರ್ವಳನ್ನು ಪ್ರೀತಿಸುತ್ತಿದ್ದು,ಇತ್ತೀಚಿನ ದಿನಗಳಲ್ಲಿ ಆಕೆ ಫೋನ್ ಕರೆಗಳನ್ನು ಸ್ವೀಕರಿಸದೇ, ಸಂದೇಶಗಳಿಗೆ ಪ್ರತಿಕ್ರಿಯೆ ನೀಡದೇ ಇದ್ದ ಕಾರಣ ಪುನೀತ್ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಈ ವಿಷಯವನ್ನು ತಮ್ಮ ಗೆಳೆಯರ ಬಳಿಯೂ ಅವರು ಹಂಚಿಕೊಂಡಿದ್ದರು. ಪ್ರೀತಿ ದೂರವಾದ ನೋವಿನಲ್ಲಿ ಪುನೀತ್ ಸಾಮಾಜಿಕ ಜಾಲತಾಣದಲ್ಲಿ ಲೈವ್ ವಿಡಿಯೋ ನಡೆಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.
- Advertisement -








