- Advertisement -
- Advertisement -



ಉಳ್ಳಾಲ: ಕಾರು ನಿಲ್ಲಿಸುವಂತೆ ಸೂಚಿಸಿದ ಮಹಿಳಾ ಪೊಲೀಸ್ ಕಾಸ್ಟೇಬಲ್ಗೆ ಅವ್ಯಾಚ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಒಡ್ಡಿರುವ ಘಟನೆ ಉಳ್ಳಾಲದಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಆರೋಪಿ ಸೋಮೇಶ್ವರದ ನಿವಾಸಿ ಸುಕೇಸ್ ಎಂದು ಗುರುತಿಸಲಾಗಿದೆ.
ಉಳ್ಳಾಲ ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ಲಕ್ಷ್ಮೀ ಜಿ ಆರ್ ಅವರು ಕರ್ತವ್ಯ ನಿರತರಾಗಿದ್ದ ವೇಳೆ ಆರೋಪಿಯ ಬಳಿ ಕಾರು ನಿಲ್ಲಿಸುವಂತೆ ಸೂಚಿಸಿದ್ದರು. ಆದರೆ ಅವರ ಮಾತನ್ನು ನಿರ್ಲಕ್ಷಿಸಿ ಉಡಾಫೆಯಿಂದ ಕಾರು ಚಲಾಯಿಸಿಕೊಂಡು ಹೋಗಿದ್ದಾನೆ. ಅಲ್ಲದೆ ಕಾನ್ ಸ್ಟೇಬಲ್ ಲಕ್ಷ್ಮೀ ಅವರನ್ನು ಏಕವಚನ ಹಾಗೂ ಅವ್ಯಾಚ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಲು ಪ್ರಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ. ಪೊಲೀಸರು ಇದೀಗ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
- Advertisement -








