Thursday, July 10, 2025
spot_imgspot_img
spot_imgspot_img

ಉಳ್ಳಾಲ: ರಕ್ತದೊತ್ತಡದಿಂದ ಕುಸಿದು ಬಿದ್ದು ನವವಿವಾಹಿತ ಸಾವು..!

- Advertisement -
- Advertisement -

ಉಳ್ಳಾಲ: ನವವಿವಾಹಿತ ಯುವಕನೊಬ್ಬ ಏಕಾಏಕಿ ಕುಸಿದು ಬಿದ್ದು ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ ಘಟನೆ ಉಳ್ಳಾಲದಲ್ಲಿ ನಡೆದಿದೆ.

ಮೃತ ಯುವಕನನ್ನು ಉಳ್ಳಾಲ ತಾಲೂಕಿನ ಮಂಜನಾಡಿ ಪೆರಡೆ ದಿ. ವೆಂಕಪ್ಪ ಹಾಗೂ ಪಾರ್ವತಿ ದಂಪತಿಯ ಪುತ್ರ ಭರತ್ (32) ಎಂದು ಗುರುತಿಸಲಾಗಿದೆ.

ನಗರದಲ್ಲಿ ಟೈಲರ್ ಕೆಲಸ ಮಾಡುತ್ತಿದ್ದ ಭರತ್ ನಾಲ್ಕು ದಿನದ ಹಿಂದೆ ರಕ್ತದೊತ್ತಡದಿಂದ ಕುಸಿದು ಬಿದ್ದಿದ್ದರು. ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮೃತಪಟ್ಟಿದ್ದಾರೆ. ಎಪ್ರಿಲ್ 22ರಂದು ಭರತ್ ವಿವಾಹ ಸಮಾರಂಭ ನಡೆದಿದ್ದು, ಪತ್ನಿ ನಗರದ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

- Advertisement -

Related news

error: Content is protected !!