




ಮಂಗಳೂರು: ಮಂಗಳೂರು ನಗರ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ನಡೆಸುತ್ತಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿ, ಗಣನೀಯ ಪ್ರಮಾಣದ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
ದಿನಾಂಕ 29/12/2025 ರಂದು ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಬಿಜೈಪಾಲ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಅಕ್ರಮವಾಗಿ ಮಾದಕ ವಸ್ತುಗಳ ಮಾರಾಟ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಉಳ್ಳಾಲ ಪೊಲೀಸರು ದಾಳಿ ನಡೆಸಿದರು. ಈ ದಾಳಿಯ ವೇಳೆ ಆರೋಪಿಯನ್ನು ಬಂಧಿಸಲಾಗಿದ್ದು, ಆತನಿಂದ ಒಟ್ಟು 425 ಗ್ರಾಂ ತೂಕದ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಗಾಂಜಾದ ಅಂದಾಜು ಮೌಲ್ಯವು ರೂ.21,000/- ಆಗಿದೆ.
ಇದೇ ವೇಳೆ ಆರೋಪಿಯ ಬಳಿ ಇದ್ದ ನಗದು ರೂ.650/- ನ್ನು ಸಹ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿಯು ಸಾರ್ವಜನಿಕರಿಗೆ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದುದಾಗಿ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಈ ಸಂಬಂಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಕ್ರೈಂ ನಂ.278/2025 ರಂತೆ ಎನ್‌ಡಿಪಿಎಸ್ ಕಾಯ್ದೆ 1985ರ ಕಲಂ 8(c) ಮತ್ತು 20(b) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಮುಂದಿನ ತನಿಖೆಯನ್ನು ಪೊಲೀಸರು ಮುಂದುವರಿಸಿದ್ದಾರೆ.
ಬಂಧಿತ ಆರೋಪಿಯನ್ನು ದಿನಾಂಕ 30/12/2025 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ








