Monday, June 15, 2026
spot_imgspot_img
spot_imgspot_img

ಉಳ್ಳಾಲ: ಕಾಲು ಜಾರಿ ಸಮುದ್ರಕ್ಕೆ ಬಿದ್ದು ವೈದ್ಯ ನೀರುಪಾಲು

- Advertisement -
- Advertisement -

ಉಳ್ಳಾಲ: ಗೆಳೆಯರೊಂದಿಗೆ ಸಮುದ್ರ ತೀರಕ್ಕೆ ಆಗಮಿಸಿದ ಮಂಗಳೂರಿನ ಖಾಸಗಿ ಆಸ್ಪತ್ರೆಯ ವೈದ್ಯರೊಬ್ಬರು ಸೋಮೇಶ್ವರ ರುದ್ರಪಾದೆಯಿಂದ ಜಾರಿ ಬಿದ್ದು ಸಾವನಪ್ಪಿದ ಘಟನೆ ಸಂಭವಿಸಿದೆ.

ಮೃತರನ್ನು ನಗರದ ಖಾಸಗಿ ಆಸ್ಪತ್ರೆಯಲ್ಲಿ ಸರ್ಜನ್ ಆಗಿರುವ, ಬೆಂಗಳೂರು ರಾಮನಗರ ನಿವಾಸಿ ಡಾ. ಆಶೀಕ್ ಗೌಡ (30) ಎಂದು ಗುರುತಿಸಲಾಗಿದೆ.

ನಿನ್ನೆ ತಡರಾತ್ರಿ ಗೆಳೆಯರೊಂದಿಗೆ ಸೋಮೇಶ್ವರ ಸಮುದ್ರ ತೀರಕ್ಕೆ ಆಗಮಿಸಿದ್ದರು. ರುದ್ರಪಾದೆಯಲ್ಲಿ ವಿಹರಿಸುತ್ತಿದ್ದ ಸಂದರ್ಭ ಡಾ.ಪ್ರದೀಶ್ ಕಲ್ಲಿನಿಂದ ಸಮುದ್ರಕ್ಕೆ ಜಾರಿ ಬಿದ್ದಿದ್ದಾರೆ. ನೀರಿನಲ್ಲಿ ನಿಂತು ರಕ್ಷಣೆಗೆ ಕೂಗುತ್ತಿದ್ದ ಸಂದರ್ಭ ಡಾ.ಆಶೀಕ್ ಗೌಡ ಇಣುಕುವ ಕ್ಷಣದಲ್ಲಿ ಕಾಲುಜಾರಿ ಅವರೂ ಬಿದ್ದು ಸಮುದ್ರಪಾಲಾಗಿದ್ದಾರೆ.

ಡಾ. ಪ್ರದೀಶ್ ಸಣ್ಣ ಕಲ್ಲು ಹಿಡಿದು ಸಮುದ್ರದಿಂದ ಪಾರಾಗಿದ್ದಾರೆ. ತಡರಾತ್ರಿವರೆಗೂ ಅಗ್ನಿಶಾಮಕ ದಳ, ಉಳ್ಳಾಲ ಪೊಲೀಸ್ ಠಾಣೆಯವರು ರಕ್ಷಣಾ ಕಾರ್ಯಾಚರಣೆ ನಡೆಸಿದರೂ ಪ್ರಯೋಜನವಾಗಲಿಲ್ಲ. ಇಂದು ಅಲ್ಲೇ ಸಮುದ್ರ ತೀರದಲ್ಲಿ ಡಾ.ಆಶೀಖ್ ಮೃತದೇಹ ಪತ್ತೆಯಾಗಿದೆ.

- Advertisement -

Related news

error: Content is protected !!