Friday, June 19, 2026
spot_imgspot_img
spot_imgspot_img

ಉಳ್ಳಾಲ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ..!

- Advertisement -
- Advertisement -

ಉಳ್ಳಾಲ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಬಬ್ಬುಕಟ್ಟೆ ಎಂಬಲ್ಲಿ ನಡೆದಿದೆ.

ಕಾರು ರಸ್ತೆಯ ಬದಿಯ ಕಬ್ಬಿಣದ ತಡೆಬೇಲಿಯನ್ನು ಭೇದಿಸಿ ನುಗ್ಗಿದ ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿದೆ. ಢಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬ ಮುರಿದುಬಿದ್ದಿದೆ. ಕಾರು ಭಾಗಶಃ ಜಖಂಗೊಂಡಿದೆ. ಕಾರಿನಲ್ಲಿದ್ದ ಇಬ್ಬರು ದೇರಳಕಟ್ಟೆ ಮೂಲದ ಖಾಸಗಿ ಆಸ್ಪತ್ರೆಯ ವೈದ್ಯರು ಎಂದು ತಿಳಿದುಬಂದಿದ್ದು, ಅವರು ತೊಕ್ಕೊಟ್ಟುವಿನಿಂದ ದೇರಳಕಟ್ಟೆ ಕಡೆ ಹೋಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

- Advertisement -

Related news

error: Content is protected !!