Wednesday, May 15, 2024
spot_imgspot_img
spot_imgspot_img

ಉಳ್ಳಾಲ: ರಸ್ತೆಯಲ್ಲಿ ಮಲಗಿದ್ದ ಹಸುಗಳ ಮೇಲೆ ಹರಿದ ಕಾರು; ಮೂರು ಗೋವುಗಳು ಮೃತ್ಯು..!!

- Advertisement -G L Acharya panikkar
- Advertisement -

ಉಳ್ಳಾಲ: ರಸ್ತೆಯ ಮೇಲೆ ಮಲಗಿದ ದನಗಳ ಮೇಲೆ ಕಾರು ಹರಿದು ಪಲ್ಟಿಯಾದ ಘಟನೆ ತೊಕ್ಕೊಟ್ಟು ಸಮೀಪದ ಕುತ್ತಾರು ಪಂಡಿತ್ ಹೌಸ್ ಎಂಬಲ್ಲಿ ಇಂದು ಮುಂಜಾನೆ ನಡೆದಿದ್ದು, ಅಪಘಾತದ ರಭಸಕ್ಕೆ ಮೂರು ಗೋವುಗಳು ಸಾವನ್ನಪ್ಪಿದ್ದು, ಕಾರಿನಲ್ಲಿದ್ದ ನಾಲ್ವರಿಗೆ ಗಂಭೀರ ಗಾಯಗಳಾಗಿವೆ.

ಬೆಳಗ್ಗಿನ ಜಾವ 3:30ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ರಸ್ತೆಯಲ್ಲಿ ಮಲಗಿದ್ದ ದನಗಳ ಮೇಲೆ ವೇಗವಾಗಿದ್ದ ಕಾರು ಹರಿದ ಪರಿಣಾಮ ಈ ಅಪಘಾತ ಸಂಭವಿಸಿದೆ. ಇದರಿಂದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಉರುಳಿಬಿದ್ದಿದ್ದು, ಸಂಪೂರ್ಣ ಜಖಂಗೊಂಡಿದೆ. ಘಟನೆಯಿಂದ ಮೂರು ದನಗಳು ಸಾವಿಗೀಡಾಗಿವೆ ಎಂದು ತಿಳಿದು ಬಂದಿದೆ. ಕಾರು ದೇರಳಕಟ್ಟೆ ಕಡೆಯಿಂದ ತೊಕ್ಕೊಟ್ಟಿನತ್ತ ಸಂಚರಿಸುತ್ತಿತ್ತು ಎಂದು ಹೇಳಲಾಗಿದೆ.

ಕಾರಿನಲ್ಲಿ ಇಬ್ಬರು ಯುವತಿಯರು, ಇಬ್ಬರು ಯುವಕರಿದ್ದರೆಂದು ಹೇಳಲಾಗಿದ್ದು ಅವರನ್ನ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರು ಸವಾರರಲ್ಲಿ ಓರ್ವ ವೈದ್ಯನಾಗಿದ್ದು ಬಾಕಿ ಮೂವರ ಬಗ್ಗೆ ಮಾಹಿತಿ ಇನ್ನಷ್ಟೆ ಸಿಗಬೇಕಾಗಿದೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!