Saturday, May 4, 2024
spot_imgspot_img
spot_imgspot_img

ಉಳ್ಳಾಲ: ಮೀನುಗಾರರ ಬಲೆಗೆ ಬಿದ್ದ ದೈತ್ಯ ಗಾತ್ರದ ಪಿಲಿ ತೊರಕೆ ಮೀನು

- Advertisement -G L Acharya panikkar
- Advertisement -

ಉಳ್ಳಾಲ: ಸೋಮೇಶ್ವರ ಉಚ್ಚಿಲ ಮೀನುಗಾರರ ಬಲೆಗೆ ದೈತ್ಯ ಗಾತ್ರದ ಪಿಲಿ ತೊರಕೆ ಮೀನು ಬಿದ್ದಿದೆ. ಸಮುದ್ರ ತಟದ ಸಮೀಪ ಬೀಸಿದ ಬಲೆಗೆ 75 ಕೆ.ಜಿ ಯ ಮೀನು ಬಲೆಗೆ ಬಿದ್ದಿದೆ.

ಉಚ್ಚಿಲ ಪೆರಿಬೈಲ್ ನಿವಾಸಿ ನಾಡದೋಣಿ ಮೀನುಗಾರರಾದ ಶೈಲೇಶ್ ಉಚ್ಚಿಲ, ಚಂದ್ರ ಉಚ್ಚಿಲ, ಅಝೀಝ್, ಕಲ್ಪೇಶ್ ಮತ್ತು ಶಂಭು ನ್ಯೂ ಉಚ್ಚಿಲ ಎಂಬವರು ಸಮುದ್ರ ತೀರದಲ್ಲಿ ಹಾಕಲಾಗಿದ್ದ ಬಲೆಗೆ ಮೀನು ಬಿದ್ದಿದೆ. ಈ ವರ್ಷದ ತಮ್ಮ ಮೀನುಗಾರಿಕೆಯಲ್ಲಿ ಸಿಕ್ಕ ಅತಿದೊಡ್ಡ ಮೀನು ಇದಾಗಿದೆ ಅನ್ನುವ ಅಭಿಪ್ರಾಯ ಅವರದ್ದಾಗಿದೆ.

ಪ್ರತಿವರ್ಷದಂತೆ ಈ ಬಾರಿಯೂ ಸಮುದ್ರದಲ್ಲಿ ಕೆಸರಿನಂತೆ ಅಲೆಗಳು ಬರುತ್ತವೆ. ಈ ನೀರಿಗೆ ಮೀನುಗಾರಿಕೆಯಲ್ಲಿ ಅತ್ಯಂತ ಪಾವಿತ್ರ್ಯತೆಯೂ ಇದೆ. ಅದರಲ್ಲಿ ಹಲವು ಬಗೆಯ ಮೀನುಗಳು ಬರುವ ಐತಿಹ್ಯವಿದೆ. ಆದರೆ ಈ ಬಾರಿ ದೊಡ್ಡ ಗಾತ್ರದ ಪಿಲಿತೊರಕೆ ಬಂದಿರುವುದು ಮೀನುಗಾರರಲ್ಲಿ ಉತ್ಸಾಹ ಮೂಡಿಸಿದೆ. ವ್ಯಾಪಾರ ಮಾಡುತ್ತಿದ್ದರೆ ಕೆಜಿಗೆ ರೂ. 200 ರಷ್ಟಿದೆ. ಆದರೆ ಸಿಕ್ಕ ಮೀನನ್ನು ವ್ಯಾಪಾರ ಮಾಡದೇ , ಈದ್ ಹಬ್ಬ ಇರುವುದರಿಂದ ತಮ್ಮೊಳಗೆ ಹಂಚಿಕೊಂಡಿದ್ದಾರೆ.

- Advertisement -

Related news

error: Content is protected !!