Wednesday, July 22, 2026
spot_imgspot_img
spot_imgspot_img

ಉಳ್ಳಾಲ: ರೈಲಿನಡಿಗೆ ತಲೆಯಿಟ್ಟು ವ್ಯಕ್ತಿ ಆತ್ಮಹತ್ಯೆ..!

- Advertisement -
- Advertisement -

ಉಳ್ಳಾಲ: ವ್ಯಕ್ತಿಯೊಬ್ಬರು ರೈಲಿನಡಿಗೆ ತಲೆಯಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಉಚ್ಚಿಲ ರೈಲ್ವೇ ಗೇಟ್ ಬಳಿ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ಮಂಗಳೂರು ನಗರದ ಕೊಂಚಾಡಿಯ ನಿವಾಸಿಯಾಗಿರುವ ಪ್ರಶಾಂತ್ (44) ಎಂದು ಗುರುತಿಸಲಾಗಿದೆ. ಸೆ.24 ರಂದು ಸಂಜೆ ಮನೆಯಿಂದ ಹೊರಟ ಪ್ರಶಾಂತ್ ಅವರು ಬೆಳಿಗ್ಗೆ ರೈಲ್ವೇ ಗೇಟ್ ಬಳಿ ಶವವಾಗಿ ಪತ್ತೆಯಾಗಿದ್ದಾರೆ. ಆಕ್ಟಿವಾ ಸ್ಕೂಟರನ್ನು ಉಳ್ಳಾಲದ ರೈಲ್ವೇ ನಿಲ್ದಾಣದಲ್ಲಿರಿಸಿ, ಉಚ್ಚಿಲ ರೈಲ್ವೇ ಗೇಟ್ ವರೆಗೆ ನಡೆದುಕೊಂಡು ಹೋಗಿ ರೈಲ್ವೇ ಹಳಿಯಲ್ಲಿ ತಲೆಯಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅವಿವಾಹಿತರಾಗಿದ್ದ ಪ್ರಶಾಂತ್ ಅವರಿಗೆ ಯಾವುದೇ ಸಮಸ್ಯೆಗಳಿರಲಿಲ್ಲ. ಅವರು ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಮಾಹಿತಿ ವೈದ್ಯಕೀಯ ವರದಿಯಿಂದ ಲಭ್ಯವಾಗಿದೆ. ಮಂಗಳೂರು ರೈಲ್ವೇ ಪೊಲೀಸ್ ಠಾಣೆಯ ಎಎಸ್ ಐ ಮಧುಚಂದ್ರ ನೇತೃತ್ವದಲ್ಲಿ ಪೊಲೀಸ್ ತಂಡ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!