Monday, June 30, 2025
spot_imgspot_img
spot_imgspot_img

ಉಳ್ಳಾಲ: ನೇಣು ಬಿಗಿದು ಯುವಕ ಆತ್ಮಹತ್ಯೆಗೆ ಶರಣು..!

- Advertisement -
- Advertisement -

ಉಳ್ಳಾಲ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆಮಾಡಿಕೊಂಡ ಘಟನೆ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಮಾಡೂರು ಎಂಬಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಯುವಕ ತಾರಿಪಡ್ಪು ವೈದ್ಯನಾಥ ದೇವಸ್ಥಾನದ ಬಳಿಯ ನಿವಾಸಿ ಶ್ರವಣ್ ಆಳ್ವ (25) ಎಂದು ಗುರುತಿಸಲಾಗಿದೆ.

ವೃತ್ತಿಯಲ್ಲಿ ಎಲೆಕ್ಟ್ರೀಶಿಯನ್ ಆಗಿದ್ದ ಶ್ರವಣ್ ಗುರುವಾರ ರಾತ್ರಿ ಸ್ನೇಹಿತನ್ನು ಭೇಟಿಯಾಗಿ ಮನೆಗೆ ಬಂದು ಊಟ ಮಾಡಿ ಟಿವಿ ವೀಕ್ಷಿಸಿ ಬಳಿಕ ಮಲಗಲು ತನ್ನ ಕೋಣೆಗೆ ಹೋಗಿದ್ದಾನೆ. ಮಧ್ಯರಾತ್ರಿ ಶ್ರವಣ್ ಅಣ್ಣ ಕೆಲಸ ಮುಗಿಸಿ ಮನೆಗೆ ಬಂದಾಗ ಶ್ರವಣ್ ಬೆಡ್ ರೂಮಿನ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಉಳ್ಳಾಲ ಪೋಲಿಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!