Saturday, June 6, 2026
spot_imgspot_img
spot_imgspot_img

ಉಳ್ಳಾಲ: ನೇಣು ಬಿಗಿದು ಯುವಕ ಆತ್ಮಹತ್ಯೆಗೆ ಶರಣು..!

- Advertisement -
- Advertisement -

ಉಳ್ಳಾಲ: ನೇಣು ಬಿಗಿದು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಕುಂಪಲ ಲಕ್ಷ್ಮೀಗುಡ್ಡೆಯಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಯುವಕ ಧನರಾಜ್ ಪೂಜಾರಿ(32) ಎಂದು ಗುರುತಿಸಲಾಗಿದೆ.

ಧನರಾಜ್ ಅವಿವಾಹಿತರಾಗಿದ್ದು, ದೇರಳಕಟ್ಟೆಯ ಯೇನಪೋಯ ಪಾರ್ಕ್ ನಲ್ಲಿ ರಿಕ್ಷಾ ಚಲಾಯಿಸುತ್ತಿದ್ದರು. ತಾಯಿ ಕೆಲಸ ಮುಗಿಸಿ ಮನೆಗೆ ಮರಳಿದಾಗ ಧನರಾಜ್ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಆಶ್ರಯ ಕಾಲನಿಯಲ್ಲಿ ನೆಲೆಸಿದ್ದ ಧನರಾಜ್ ಕುಟುಂಬವು ಮನೆ ಪುನರ್ ನಿರ್ಮಾಣದ ಹಿನ್ನೆಲೆಯಲ್ಲಿ ಲಕ್ಷ್ಮೀಗುಡ್ಡೆಯಲ್ಲಿ ನೆಲೆಸಿತ್ತು.

ಧನರಾಜ್ ತಂದೆ ರಿಕ್ಷಾ ಚಾಲಕ ಲಿಂಗಪ್ಪ ಪೂಜಾರಿ ಅನಾರೋಗ್ಯದಿಂದ ಬಳಲುತ್ತಿದ್ದರು. ಇದರಿಂದ ಮನನೊಂದು ಧನರಾಜ್ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಮೃತದೇಹವನ್ನು ಉಳ್ಳಾಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಮೃತದೇಹವನ್ನು , ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಮೃತ ಧನರಾಜ್ ತಂದೆ, ತಾಯಿ, ಸಹೋದರನನ್ನು ಅಗಲಿದ್ದಾರೆ.

- Advertisement -

Related news

error: Content is protected !!