Friday, May 10, 2024
spot_imgspot_img
spot_imgspot_img

ಉಳ್ಳಾಲ: ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾದ ಯುವಕ

- Advertisement -G L Acharya panikkar
- Advertisement -
vtv vitla

ಉಳ್ಳಾಲ: ಯುವಕನೋರ್ವ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ತೊಕ್ಕೊಟ್ಟು ಸಮೀಪದ ಕಾಪಿಕಾಡು, ಸತ್ಯನಾರಾಯಣ ಕಂಪೌಂಡ್ ನಲ್ಲಿ ನಡೆದಿದೆ.

ಕಾಪಿಕಾಡು, ಸತ್ಯನಾರಾಯಣ ಕಂಪೌಂಡ್ ನಿವಾಸಿ ನಿತಿನ್ ಪೂಜಾರಿ(36) ಆತ್ಮಹತ್ಯೆಗೈದ ಯುವಕ. ನಿತಿನ್ ಮನೆಯ ಕೋಣೆಯೊಳಗೆ ಸೇರಿದ್ದನೆನ್ನಲಾಗಿದೆ. ನೆರೆಯ ಮನೆಯಲ್ಲಿ ಬೀಡಿ ಕಟ್ಟುತ್ತಿದ್ದ ಆತನ ತಾಯಿ ಬಂದು ಕೋಣೆಯ ಬಾಗಿಲು ಬಡಿದಿದ್ದು ಬಾಗಿಲ ಎಡೆಯಿಂದ ನೋಡಿದಾಗ ಮಗ ಫ್ಯಾನಿಗೆ ನೇಣು ಬಿಗಿದ ವಿಚಾರ ತಿಳಿದಿದೆ.

ಮೃತ ನಿತಿನ್ ಡೆತ್ ನೋಟ್ ಒಂದನ್ನು ಬರೆದಿದ್ದು ಅದರಲ್ಲಿ ನನ್ನ ಸಾವಿಗೆ ಪ್ರವೀಣ್ ಶೆಟ್ಟಿ ಚೆಂಬುಗುಡ್ಡೆ ಎಂಬಾತ ನೇರ ಕಾರಣ. ಇವರಿಂದ ಮಾನಸಿಕವಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುತ್ತೇನೆ. ಇವರಿಗೆ ಕಠಿಣ ಶಿಕ್ಷೆಯನ್ನು ನೀಡಬೇಕಾಗಿ ವಿನಂತಿ ಎಂದು ಉಲ್ಲೇಖಿಸಿದ್ದಾರೆ.

ಮೃತ ನಿತಿನ್ ಈ ಮೊದಲು ಮಾಂಡೋವಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದು, ಈಗ ಸಿಕ್ಕಿದ ಸಣ್ಣ ಪುಟ್ಟ ಕೆಲಸಕ್ಕೆ ತೆರಳುತ್ತಿದ್ದನಂತೆ. ನಿತಿನ್ ಅಕ್ಕ ಬಾವ, ಅಮ್ಮನನ್ನು ಅಗಲಿದ್ದಾರೆ. ಸ್ಥಳಕ್ಕೆ ಬಂದ ಉಳ್ಳಾಲ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು ಪ್ರಕರಣ ದಾಖಲಿಸಿ ತನಿಖೆ ಕೈಗೆತ್ತಿಕೊಂಡಿದ್ದಾರೆ.

- Advertisement -

Related news

error: Content is protected !!