- Advertisement -
- Advertisement -
ಉಳ್ಳಾಲ: ವ್ಯಕ್ತಿಯೊಬ್ಬರಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಆರೋಪಿಯನ್ನು ಉಳ್ಳಾಲ ಪೊಲೀಸರು ಮಂಗಳವಾರ ತಡರಾತ್ರಿ ಬಂಧಿಸಿದ್ದಾರೆ. ಉಳ್ಳಾಲದಲ್ಲಿ ಗ್ಯಾಸ್ ಸ್ಟವ್ ಗೆ ಸಂಬಂಧಿಸಿದ ಸಾಮಗ್ರಿಗಳನ್ನು ಹೊಂದಿರುವ ಅಂಗಡಿ ಮಾಲಕ ಹರೀಶ್ ಗಾಣಿಗ ಚೂರಿ ಇರಿತಕ್ಕೊಳಗಾಗಿರುವವರು.
ಹರೀಶ್ ಗಾಣಿಗ ಸ್ಥಳೀಯ ಗಾಂಜಾ ಮಾಫಿಯಾದ ವಿರುದ್ಧ ಪದೇ ಪದೇ ಪೊಲೀಸ್ ದೂರು ನೀಡುತ್ತಿದ್ದರು ಎನ್ನಲಾಗಿದೆ. ಇದರಿಂದ ಆಕ್ರೋಶಗೊಂಡ ಯುವಕ ಹಾಡ ಹಗಲೇ ಮಾರಕಾಸ್ತ್ರದಿಂದ ಇರಿದಿದ್ದಾನೆ. ಬಂಧಿತನನ್ನು ಅಪ್ರಾಪ್ತ ವಯಸ್ಸಿನ ಯುವಕ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಬಗ್ಗೆ ಹರೀಶ್ ಗಾಣಿಗ ಉಳ್ಳಾಲ ಠಾಣೆಗೆ ದೂರು ನೀಡಿದ್ದರು. ಇದರಿಂದ ಕೋಪಗೊಂಡ ಆರೋಪಿ ಮಂಗಳವಾರ ಹರೀಶ್‌ರಿಗೆ ಚೂರಿಯಿಂದ ಇರಿದು ಪರಾರಿಯಾಗಿದ್ದನು. ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ಮಂಗಳವಾರ ರಾತ್ರಿ ಮೋಗವೀರ ಪಟ್ಟಣದಲ್ಲಿ ಬಂಧಿಸಿದ್ದಾರೆ.
- Advertisement -