Sunday, June 14, 2026
spot_imgspot_img
spot_imgspot_img

ಉಳ್ಳಾಲ: ಗಾಂಜಾ ಮಾರಾಟಕ್ಕೆ ಯತ್ನ; ಆರೋಪಿ ಅರೆಸ್ಟ್..!

- Advertisement -
- Advertisement -

ಉಳ್ಳಾಲ: ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಉಳ್ಳಾಲ ತಾಲೂಕಿನ ಬೆಳ್ಮ ಗ್ರಾಮ ಪಂಚಾಯತ್ ವ್ಯಾಪ್ತಿಯ ಖಾಲಿ ಜಾಗದಲ್ಲಿ ಎಸಿಪಿ ನೇತೃತ್ವದ ತಂಡ ಬಂಧಿಸಿದೆ.

ಬಂಧಿತ ಆರೋಪಿಯನ್ನು ಕೋಟೆಕಾರು ಬೀರಿ ನಿವಾಸಿ ಮಹಮ್ಮದ್ ಇರ್ಫಾನ್ (22) ಎಂದು ಗುರುತಿಸಲಾಗಿದೆ.

ಆರೋಪಿಯಿಂದ ಮಾರಾಟ ಮಾಡಲು ತಂದಿದ್ದ 333 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ. ಕೋಣಾಜೆ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಮಾರಾಟ ಮಾಡುತ್ತಿದ್ದ ಗಾಂಜಾದ ಮೌಲ್ಯ ಸುಮಾರು 10 ಸಾವಿರ ರೂ. ಇರಬಹುದು ಎಂದು ಅಂದಾಜಿಸಲಾಗಿದೆ. ಎಸಿಪಿ ಧನ್ಯಾ ನಾಯಕ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಕೋಣಾಜೆ ಉಪ ನಿರೀಕ್ಷಕ ನಾಗರಾಜ್ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

- Advertisement -

Related news

error: Content is protected !!