Sunday, June 29, 2025
spot_imgspot_img
spot_imgspot_img

ಉಳ್ಳಾಲ: ಸಮುದ್ರಪಾಲಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ..!

- Advertisement -
- Advertisement -

ಉಳ್ಳಾಲ: ಸಮುದ್ರತೀರಕ್ಕೆ ವಿಹಾರಕ್ಕೆಂದು ತೆರಳಿದ್ದ ಇಬ್ಬರು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಸಮುದ್ರಪಾಲಾಗಿದ್ದು ಇವರ ಮೃತದೇಹ ಪತ್ತೆಯಾಗಿದೆ.

ಸೊಮೇಶ್ವರ ಪರಿಜ್ಞಾನ ಕಾಲೇಜಿನಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾದ ಯಶ್ವಿತ್, ಯುವರಾಜ ಸೇರಿದಂತೆ ಒಟ್ಟು ಆರು ಮಂದಿ ವಿದ್ಯಾರ್ಥಿಗಳು ಶನಿವಾರ ಮದ್ಯಾಹ್ನ 12.40ಕ್ಕೆ ಕಾಲೇಜು ಮುಗಿಸಿ ಸೋಮೇಶ್ವರ ಶ್ರೀ ಸೊಮನಾಥ ದೇವಸ್ಥಾನಕ್ಕೆ ತೆರಳಿದ್ದರು. ಪೂಜೆಯ ಬಳಿಕ ದೇವಸ್ಥಾನದಲ್ಲಿ ಊಟ ಮುಗಿಸಿ ಅಲ್ಲೇ ಪಕ್ಕದ ಮರದಡಿಯಲ್ಲಿ ಕುಳಿತಿದ್ದರು. ಸುಮಾರು ಮೂರು ಗಂಟೆಯ ಬಳಿಕ ಸ್ಥಳೀಯ ಗೂಡಂಗಡಿಯಿಂದ ತಿಂಡಿ ತೆಗೆದುಕೊಂಡು ಸೋಮೇಶ್ವರ ದೇವಸ್ಥಾನದಿಂದ ಉಚ್ಚಿಲದ ಕಡೆಗೆ ಸುಮಾರು ಒಂದು ಕಿ. ಮೀ.ಸಮುದ್ರದ ಬದಿಯಲ್ಲೇ ನಡೆದುಕೊಂಡು ಹೋಗಿದ್ದು, ಸೋಮೇಶ್ವರ ಅಲಿಮಕಲ್ಲು ಬಳಿ ಸಮುದ್ರಕ್ಕೆ ಇಳಿದಿದ್ದರು.

ಈ ಸಂದರ್ಭ ನಾಲ್ವರು ಸಮುದ್ರ ಬದಿಯಲ್ಲಿ ಕುಳಿತಿದ್ದರೆ, ಯುವರಾಜ್ ಮತ್ತು ಯಶ್ವಿತ್ ಸಮುದ್ರದ ನೀರಿಗಿಳಿದು ಕಲ್ಲಿನ ಬಳಿ ತೆರಳಿದ್ದರು. ಈ ಸಂದರ್ಭದಲ್ಲಿ ಸಮುದ್ರದ ಅಲೆಯೊಂದಕ್ಕೆ ಯುವರಾಜ್ ಜಾರಿ ಬಿದ್ದು ಸಮುದ್ರ ಪಾಲಾದಾಗ ಯಶ್ವಿತ್ ಆತನನ್ನು ರಕ್ಷಿಸಲು ಹೋಗಿ ಸಮುದ್ರ ಪಾಲಾಗಿದ್ದರು. ಮೃತದೇಹವನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!