Saturday, May 4, 2024
spot_imgspot_img
spot_imgspot_img

ಉಳ್ಳಾಲ : ಮಗಳ ವಿವಾಹ ದಿನದಂದೇ ತಂದೆ ಹೃದಯಘಾತದಿಂದ ಸಾವು

- Advertisement -G L Acharya panikkar
- Advertisement -

ಉಳ್ಳಾಲ: ಬೋಳಿಯಾರ್‌ನ ಕುಚುಗುಡ್ಡೆಯಲ್ಲಿ ಮಗಳ ಮದುವೆಯ ದಿನದಂದೇ ತಂದೆ ಹೃದಯಘಾತಗೊಂಡು ಮೃತಪಟ್ಟ ಘಟನೆ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ಬೋಳಿಯಾರ್‌ನ ಕುಕ್ಕೋಟ್ಟು ಕುಚುಗುಡ್ಡೆಯ ಹಸನಬ್ಬ (60) ಎಂದು ಗುರುತಿಸಲಾಗಿದೆ. ಹಸನಬ್ಬ ಅವರ ಮಗಳಿಗೆ ಕಾಸರಗೋಡುವಿನ ಯುವಕನೊಂದಿಗೆ ಸೋಮವಾರದಂದು ಹೊಸಂಗಡಿಯ ಸಭಾಂಗಣವೊಂದರಲ್ಲಿ ಮದುವೆ ನಿಗದಿಯಾಗಿತ್ತು .

ದುರಾದೃಷ್ಟವಶಾತ್ ಸೋಮವಾರ ಮುಂಜಾನೆ 4 ಗಂಟೆಯ ವೇಳೆಗೆ ತೀವ್ರ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ಕೊಂಡೊಯ್ಯುವ ಪ್ರಯತ್ನ ಮಾಡಿದರೂ ಯಾವುದೇ ಪ್ರಯೋಜನವಾಗದೆ ಹೃದಯಾಘಾತದಿಂದ ಅವರು ಮೃತಪಟ್ಟಿದ್ದಾರೆ ಎನ್ನ ಲಾಗಿದೆ. ಇವರು ಕುಕ್ಕೋಟ್ಟು ಜುಮಾ ಮಸೀದಿಯ ಕೋಶಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ಇವರಿಗೆ ಎರಡು ಗಂಡು ಹಾಗೂ ನಾಲ್ಕು ಪುತ್ರಿಯರಿದ್ದಾರೆ. ಸಭಾಂಗಣದಲ್ಲಿ ಮದುವೆ ಕಾರ್ಯಕ್ರಮ ರದ್ದುಗೊಳಿಸಲಾಗಿತ್ತು. ಹಾಗೂ ಎರಡು ಕುಟುಂಬದ ಹಿರಿಯರೊಂದಿಗೆ ಚರ್ಚಿಸಿ ಸಂಜೆಯ ವೇಳೆಗೆ ವರನ ಮನೆಯಲ್ಲಿ ಸರಳವಾಗಿ ನಿಖಾ ನೆರವೇರಿದೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!