- Advertisement -
- Advertisement -


ಉಳ್ಳಾಲ: ತೊಕ್ಕೊಟ್ಟು ಸೆಬೆಸ್ಟಿಯನ್ ಕಾಲೇಜು ಬಳಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಕಿನ್ಯ ನಿವಾಸಿ ರವಿರಾಜ್(31) ಎಂದು ಗುರುತಿಸಲಾಗಿದೆ. ಪೈಂಟಿಂಗ್ ಕೆಲಸ ಮಾಡುತ್ತಿರುವ ರವಿರಾಜ್ ಕೆಲಸ ನಿಮಿತ್ತ ತೊಕ್ಕೊಟ್ಟುವಿಗೆ ಬಂದಿದ್ದ ಎನ್ನಲಾಗಿದೆ. ಈ ವೇಳೆ ಬಾಲಕಿ ಮನೆ ಕಡೆ ಸೈಕಲ್ ನಲ್ಲಿ ಹೋಗುತ್ತಿದ್ದುದನ್ನು ನೋಡಿದ ಆರೋಪಿ ರವಿರಾಜ್ ಸೈಕಲ್ ಅನ್ನು ಅಡ್ಡಗಟ್ಟಿ ನಿಲ್ಲಿಸಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ.

ಇದನ್ನು ನೋಡಿದ ಸ್ಥಳೀಯರು ಉಳ್ಳಾಲ ಪೊಲೀಸರಿಗೆ ಮಾಹಿತಿ ನೀಡಿದ್ದು ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.


- Advertisement -