Saturday, June 28, 2025
spot_imgspot_img
spot_imgspot_img

ಉಳ್ಳಾಲ: ಹಿಟ್‌ ಆಂಡ್‌ ರನ್‌ ಪ್ರಕರಣ; ಗಂಭೀರ ಗಾಯಗೊಂಡಿದ್ದ ಬೈಕ್‌ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು..!!

- Advertisement -
- Advertisement -

ಉಳ್ಳಾಲ: ಬೈಕ್ ಗೆ ಇನ್ನೋವಾ ಕಾರೊಂದು ಡಿಕ್ಕಿ ಹೊಡೆದು ಪರಾರಿಯಾಗಿರುವ ಘಟನೆ ಕಳೆದ ಜೂ.4 ರ ಆದಿತ್ಯವಾರ ತಡರಾತ್ರಿ ಉಚ್ಚಿಲ, ಸಂಕೋಳಿಗೆ ಎಂಬಲ್ಲಿ ನಡೆದಿದ್ದು, ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬೈಕ್‌ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.

ಕೋಟೆಕಾರು ಪಟ್ಟಣ ವ್ಯಾಪ್ತಿಯ ಮಾಡೂರು ವೈದ್ಯನಾಥ ದೈವಸ್ಥಾನ ರಸ್ತೆ ನಿವಾಸಿ ತೇಜಸ್ ಕುಲಾಲ್ (28) ಮೃತ ಯುವಕ. ಕಳೆದ ಜೂ.4 ರ ಆದಿತ್ಯವಾರ ತಡರಾತ್ರಿ ತೇಜಸ್ ಸಂಕೋಳಿಗೆಯ ಪೆಟ್ರೋಲ್‌ ಬಂಕಿಗೆ ಪೆಟ್ರೋಲ್ ತುಂಬಿಸಲು ಬೈಕಲ್ಲಿ ತೆರಳುತ್ತಿದ್ದ ವೇಳೆ ಕೇರಳ ನೋಂದಣಿಯ ಇನ್ನೋವಾ ಕಾರೊಂದು ಡಿಕ್ಕಿ ಹೊಡೆದು ಪರಾರಿಯಾಗಿತ್ತು. ಹಿಟ್ & ರನ್ ಪ್ರಕರಣ ದಾಖಲಿಸಿದ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ತಲಪಾಡಿ ಟೋಲ್ ಗೇಟ್‌ನ ಸಿಸಿಟಿವಿ ದೃಶ್ಯಾವಳಿ ಆಧಾರದಲ್ಲಿ ಮರುದಿನವೇ ಘಟನೆಗೆ ಕಾರಣವಾದ ಕಾರನ್ನು ಜಪ್ತಿಗೊಳಿಸಿದ್ದರು.

ಗಂಭೀರ ಗಾಯಗೊಂಡಿದ್ದ ತೇಜಸ್‌ರನ್ನು ತಕ್ಷಣಕ್ಕೆ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದರು. ನಂತರ ಮಂಗಳೂರಿನ ಕೆಎಮ್ ಸಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಮೃತ ತೇಜಸ್ ಅವಿವಾಹಿತರಾಗಿದ್ದು ಸುಝಕಿ ಕಂಪನಿಯಲ್ಲಿ ಮೆಕ್ಯಾನಿಕ್ ಆಗಿದ್ದರು. ತೇಜಸ್ ಬಜರಂಗದಳ ಮಾಡೂರು ಶಾಖೆಯ ಸಕ್ರಿಯ ಕಾರ್ಯಕರ್ತರಾಗಿದ್ದರು. ಮೃತರು ತಂದೆ ರಾಮ ಕುಲಾಲ್, ತಾಯಿ ರೇವತಿ ಮತ್ತು ಅಣ್ಣ ರವೀಂದ್ರ ಅವರನ್ನ ಅಗಲಿದ್ದಾರೆ.

- Advertisement -

Related news

error: Content is protected !!