Thursday, June 18, 2026
spot_imgspot_img
spot_imgspot_img

ಒಂಟಿ ಮಹಿಳೆಯ ಶವ ಪತ್ತೆ…ಅತ್ಯಾಚಾರವೆಸಗಿ ಕೊಲೆ ಮಾಡಿರುವ ಶಂಕೆ.!

- Advertisement -
- Advertisement -

ಉಳ್ಳಾಲ: ಕೊಣಾಜೆ ಹೂಹಾಕುವಕಲ್ಲು ಬೆಳ್ಳೇರಿಯ ಮನೆಯೊಂದರಲ್ಲಿ ಮಹಿಳೆಯೋರ್ವರ ಶವ ಪತ್ತೆಯಾಗಿದ್ದು, ಅತ್ಯಾಚಾರವೆಸಗಿ ಕೊಲೆಗೈದಿರುವ ಶಂಕೆ ವ್ಯಕ್ತಪಡಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಾಳೆಪುಣಿ ಗ್ರಾಮದ ಹೂಹಾಕುವಕಲ್ಲುಬಳಿಯ ಬೆಳ್ಳೇರಿ ಎಂಬಲ್ಲಿ ಘಟನೆ ನಡೆದಿದ್ದು, ಸಾವನ್ನಪ್ಪಿರುವ ಮಹಿಳೆಯನ್ನು ಕುಸುಮ (50) ಎಂದು ಗುರುತಿಸಲಾಗಿದೆ. ಮೂರು ದಿನಗಳ ಹಿಂದೆ ಮೃತಪಟ್ಟಿರುವ ಸಾಧ್ಯತೆ ಇದ್ದು. ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ಮುಂದುವರೆದಿದೆ.

ಮಹಿಳೆ ಮನೆಯಲ್ಲಿ ಒಂಟಿಯಾಗಿ ವಾಸವಾಗಿದ್ದರು. ಮಳೆಯನ್ನು ಅತ್ಯಾಚಾರವೆಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮಹಿಳೆ ವಿವಸ್ತ್ರ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಸುಟ್ಟ ಗಾಯಗಳೂ ಕಂಡುಬಂದಿದೆ. ಮನೆಯ ಕರ್ಟನ್ ಕೂಡಾ ಅರ್ಧ ಸುಟ್ಟ ರೀತಿಯಲ್ಲಿದೆ. ಅಗ್ನಿ ಆಕಸ್ಮಿಕವಾಗಿರುವ ಸಾಧ್ಯತೆಯೂ ಇದೆ ಎನ್ನಲಾಗಿದೆ.

- Advertisement -

Related news

error: Content is protected !!