- Advertisement -
- Advertisement -



ಮಂಗಳೂರು: ಸ್ಕೂಟರ್‍ನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ವಿದ್ಯಾರ್ಥಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿಗಳನ್ನು ಆದರ್ಶ್ ಜ್ಯೋತಿ (22), ಯೋಯಲ್ ಜಾಯ್ಸ್ (22) ಎಂದು ಗುರುತಿಸಲಾಗಿದೆ.
ಉಳ್ಳಾಲದ ಬಗಂಬಿಲ ಎಂಬಲ್ಲಿ ಸ್ಕೂಟರ್ ಮೂಲಕ ಗಾಂಜಾ ಸಾಗಿಸುತ್ತಿದ್ದ ವೇಳೆ ಪೊಲೀಸರು ಅಡ್ಡಗಟ್ಟಿ ತಪಾಸಣೆ ನಡೆಸಿದ್ದಾರೆ. ಈ ವೇಳೆ ಸ್ಕೂಟರ್ ನಲ್ಲಿ 220 ಗ್ರಾಂ ಗಾಂಜಾ ಸಿಕ್ಕಿದೆ.


ಈ ಬಗ್ಗೆ ಉಳ್ಳಾಲ ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.


- Advertisement -