Monday, June 8, 2026
spot_imgspot_img
spot_imgspot_img

ಸಾಲಬಾದೆ ತಾಳಲಾರದೆ ದಂಪತಿ ಆತ್ಮಹತ್ಯೆ ಗೆ ಶರಣು..!

- Advertisement -
- Advertisement -

ಸಾಲಬಾದೆ ತಾಳಲಾರದೆ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ನಾರಾಯಣಸ್ವಾಮಿಗುಡಿ ಬೀದಿಯಲ್ಲಿ ನಡೆದಿದೆ.

ನಾಗೇಶ(56), ಸತ್ಯಲಕ್ಷ್ಮೀ (46) ಮೃತ ದುರ್ದೈವಿಗಳಾಗಿದ್ದಾರೆ.

ಕಳೆದ ಆರು ತಿಂಗಳಿಂದ ಮೈಸೂರಿನಲ್ಲಿ ವಾಸವಾಗಿದ್ದ ದಂಪತಿ ಶನಿವಾರ ರಾತ್ರಿ ಚಾಮರಾಜ ನಗರದ ಕೊಳ್ಳೇಗಾಲಕ್ಕೆ ಬಂದಿದ್ದಾರೆ. ಬೆಳಗಿನ ಜಾವ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಂಪತಿ ಲಕ್ಷಾಂತರ ರೂಪಾಯಿ ಸಾಲ ಮಾಡಿದ್ದು, ತೀರಿಸಲಾಗದೆ ಆತ್ಮಹತ್ಯೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಕೊಳ್ಳೇಗಾಲ ಟೌನ್ ಪೊಲೀಸರು ಪ್ರಕರಣ ದಾಖಲು ಮಾಡಿ ತನಿಖೆ ಆರಂಭಿಸಿದ್ದಾರೆ.

- Advertisement -

Related news

error: Content is protected !!