Sunday, November 8, 2026
spot_imgspot_img
spot_imgspot_img

ಮಗುವಿಗೆ ಜನ್ಮ ನೀಡಿದ ಕೂಡಲೇ ನವಜಾತ ಶಿಶುವನ್ನು ಕಿಟಕಿಯಿಂದ ಎಸೆದ ಅಪ್ರಾಪ್ತ ಬಾಲಕಿ..!

- Advertisement -
- Advertisement -

ಪಶ್ಚಿಮ ಬಂಗಾಳ: ಹೂಗ್ಲಿ ಜಿಲ್ಲೆಯ ನರ್ಸಿಂಗ್ ಹೋಂನಲ್ಲಿ ಹೆರಿಗೆಯಾದ ಕೆಲವೇ ನಿಮಿಷಗಳಲ್ಲಿ 16 ವರ್ಷದ ಅಪ್ರಾಪ್ತ ಬಾಲಕಿಯೊಬ್ಬಳು ನವಜಾತ ಹೆಣ್ಣು ಮಗುವನ್ನು ಶೌಚಾಲಯದ ಕಿಟಕಿಯಿಂದ ಹೊರಗೆ ಎಸೆದಿರುವ ಘಟನೆ ನಡೆದಿದೆ.

ಉತ್ತರಪಾರ ಪುರಸಭೆ ವ್ಯಾಪ್ತಿಯ ನರ್ಸಿಂಗ್ ಹೋಂನಲ್ಲಿ ಈ ಘಟನೆ ಶನಿವಾರ ನಡೆದಿದೆ. ಶುಕ್ರವಾರ ತಡರಾತ್ರಿ ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಬಾಲಕಿಯನ್ನು ಆಕೆಯ ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದರು. ಸಾಮಾನ್ಯ ಹೊಟ್ಟೆ ನೋವು ಎಂದು ಭಾವಿಸಿ ಆಕೆಯನ್ನು ಆಸ್ಪತ್ರೆಗೆ ಕರೆತಂದಿದ್ದಾಗಿ ಕುಟುಂಬಸ್ಥರು ತಿಳಿಸಿದ್ದಾರೆ.

ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಶನಿವಾರ ಬೆಳಗ್ಗೆ ಹೊಟ್ಟೆ ನೋವು ತೀವ್ರಗೊಂಡ ಹಿನ್ನೆಲೆಯಲ್ಲಿ ಬಾಲಕಿ ಶೌಚಾಲಯಕ್ಕೆ ತೆರಳಿದ್ದಾಳೆ. ಅಲ್ಲಿ ಯಾರ ಸಹಾಯವೂ ಇಲ್ಲದೆ ಮಗುವಿಗೆ ಜನ್ಮ ನೀಡಿದ್ದಾಳೆ. ಬಳಿಕ ನವಜಾತ ಶಿಶುವನ್ನು ಶೌಚಾಲಯದ ಕಿಟಕಿಯಿಂದ ಹೊರಗೆ ಎಸೆದಿದ್ದಾಳೆ ಎಂದು ನರ್ಸಿಂಗ್ ಹೋಂ ಆಡಳಿತ ಮಂಡಳಿ ತಿಳಿಸಿದೆ.

ಶಿಶು ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ಗಮನಿಸಿದ ದಾರಿಹೋಕರೊಬ್ಬರು ತಕ್ಷಣ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ನರ್ಸ್ ಸ್ಥಳಕ್ಕೆ ಧಾವಿಸಿ ಮಗುವನ್ನು ಒಳಗೆ ಕರೆತಂದರಾದರೂ, ಅಷ್ಟರಲ್ಲಾಗಲೇ ಮಗು ಮೃತಪಟ್ಟಿತ್ತು. ಮೃತಪಟ್ಟ ನವಜಾತ ಶಿಶು ಹೆಣ್ಣು ಮಗು ಎಂದು ಪೊಲೀಸರು ತಿಳಿಸಿದ್ದಾರೆ.

ತಮ್ಮ ಮಗಳು ಗರ್ಭಿಣಿಯಾಗಿರುವ ವಿಚಾರವೇ ತಮಗೆ ತಿಳಿದಿರಲಿಲ್ಲ ಎಂದು ಬಾಲಕಿಯ ಕುಟುಂಬಸ್ಥರು ಪೊಲೀಸರಿಗೆ ತಿಳಿಸಿದ್ದಾರೆ. ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದಾಳೆ ಎಂದು ಭಾವಿಸಿ ಶುಕ್ರವಾರ ಸಂಜೆ ನರ್ಸಿಂಗ್ ಹೋಂಗೆ ಕರೆತಂದಿದ್ದೆವು. ಶನಿವಾರ ಬೆಳಗ್ಗೆ ಆಸ್ಪತ್ರೆಯಿಂದ ಕರೆ ಬಂದ ಬಳಿಕವೇ ಘಟನೆ ತಿಳಿಯಿತು ಎಂದು ಬಾಲಕಿಯ ತಾಯಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ನರ್ಸಿಂಗ್ ಹೋಂನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುವುದರ ಜೊತೆಗೆ ಬಾಲಕಿಯ ಪೋಷಕರು ಹಾಗೂ ಕುಟುಂಬದ ಇತರ ಸದಸ್ಯರಿಂದ ಮಾಹಿತಿ ಸಂಗ್ರಹಿಸಲಾಗುತ್ತಿದೆ. ನವಜಾತ ಶಿಶುವಿನ ಸಾವಿನ ನಿಖರ ಕಾರಣ ತಿಳಿಯಲು ಮರಣೋತ್ತರ ಪರೀಕ್ಷೆ ನಡೆಸುವ ಸಾಧ್ಯತೆಯೂ ಇದೆ. ತನಿಖೆಯ ಬಳಿಕ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿರುವುದಾಗಿ ವರದಿ ಮೂಲಕ ತಿಳಿದುಬಂದಿದೆ.

- Advertisement -

Related news

error: Content is protected !!