ಮಂಗಳೂರು: ಭೂಗತ ಲೋಕದ ಪಾತಕಿ ರವಿ ಪೂಜಾರಿ ಮತ್ತು ಕಲಿ ಯೊಗೀಶ್ ಸಹಚರ ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮುಗಳಿ ಹೊಸ ಮನೆ ನಾಯರ್ ತರ್ಪು ತಿಮ್ಮಪ್ಪ ಶೆಟ್ಟಿ ಎಂಬವರ ಮಗ ಟಿ.ದಿನೇಶ್ ಶೆಟ್ಟಿ ಎಂಬಾತನಿಗೆ ನ್ಯಾಯವಾದಿ ಖಾಸೀಂ ನೌಷಾದ್ ನನ್ನು ಕೊಲೆ ಮಾಡಿದ ಆರೋಪದಡಿಯಲ್ಲಿ ಮಾನ್ಯ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದ್ದು, ಉಚ್ಛ ನ್ಯಾಯಾಲಯಕ್ಕೆ ಅಫೀಲು ಸಲ್ಲಿಸಿ 2019ರಲ್ಲಿ ಬಿಡುಗಡೆಗೊಂಡಿದ್ದನು. ಬಳಿಕ ಹಲವು ಪ್ರಕರಣಗಳಲ್ಲಿ ತಲೆ ಮರೆಸಿಕೊಂಡಿದ್ದ ದಿನೇಶ್ ಶೆಟ್ಟಿಯನ್ನು ಪೊಲೀಸರು ಬಂಧಿಸಿದ್ದಾರೆ.

ಈತ ಭೂಗತ ಲೋಕದ ಪಾತಕಿ ರವಿ ಪೂಜಾರಿ ಮತ್ತು ಕಲಿ ಯೊಗೀಶ್ ರವರಿಂದ ಸುಪಾರಿ ಪಡೆದು ಖಾಸೀಂ ನೌಷಾದ್ ನನ್ನು ಕೊಲೆ ಮಾಡಿದ ಆರೋಪ ಈತನ ಮೇಲಿದ್ದು, 11 ವರ್ಷ ಕಾರಾಗೃಹ ಶಿಕ್ಷೆ ಅನುಭವಿಸಿ ಬಳಿಕ ಉಚ್ಛ ನ್ಯಾಯಾಲಯಕ್ಕೆ ಅಫೀಲು ಸಲ್ಲಿಸಿದ್ದು ಡಿಸೆಂಬರ್ 2019 ರಲ್ಲಿ ಬಿಡುಗಡೆಗೊಂಡಿರುತ್ತಾನೆ. ಬಳಿಕ ಕಾವೂರು ಠಾಣೆಯ ಅಕ್ರ ಸಂಖ್ಯೆ 01/2019 ರ ಅಪಹರಣ ಪ್ರಕರಣ, ಮಂಗಳೂರು ಉತ್ತರ ಪೊಲೀಸ್ ಠಾಣೆ ಅಕ್ರ ಸಂಖ್ಯೆ 88/2022 ರ ವಂಚನೆ ಪ್ರಕರಣ ಮತ್ತು ಮಂಗಳೂರು ಉತ್ತರ ಪೊಲೀಸ್ ಠಾಣೆ ಅಕ್ರ ಸಂಖ್ಯೆ 06/2023ರ ಸುಲಿಗೆ ಪ್ರಕರಣಗಳಲ್ಲಿಯೂ ಭಾಗಿಯಾಗಿ ಕೋರ್ಟಿಗೂ ಹಾಜರಾಗದೆ ಕಳೆದ ಒಂದೂವರೆ ವರ್ಷದಿಂದ ತಲೆ ಮೆರೆಸಿಕೊಂಡಿದ್ದನು. ಉತ್ತರ ಉಪವಿಭಾಗ ಎಸಿಪಿ ಹಾಗೂ ಅವರ ತಂಡ ಆರೋಪಿಯನ್ನು ನ.25ರಂದು ವಶಕ್ಕೆ ಪಡೆದುಕೊಂಡಿದ್ದಾರೆ.












