Wednesday, May 8, 2024
spot_imgspot_img
spot_imgspot_img

ಮಹಿಳೆಯನ್ನು ವಿವಸ್ತ್ರಗೊಳಿಸಿ ಬೆತ್ತಲೆ ಮೆರವಣಿಗೆ; ವಿಡಿಯೋ ವೈರಲ್‌- ಮೂವರು ವಶಕ್ಕೆ

- Advertisement -G L Acharya panikkar
- Advertisement -

ಮಹಿಳೆಯೊಬ್ಬರನ್ನು ಆಕೆಯ ಪತಿ ಮತ್ತು ಆತನ ಕುಟುಂಬ ಸದಸ್ಯರು ಸಾರ್ವಜನಿಕವಾಗಿ ಥಳಿಸಿ ವಿವಸ್ತ್ರಗೊಳಿಸಿದ ಘಟನೆ ರಾಜಸ್ಥಾನದ ಪ್ರತಾಪ್‌ಗಢ ಜಿಲ್ಲೆಯಲ್ಲಿ ನಡೆದಿದೆ. ಸೋಮವಾರ ನಡೆದ ಘಟನೆ ಇದಾಗಿದೆ ಎಂದು ಹೇಳಲಾಗುತ್ತಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಘಟನೆಗೆ ಸಂಬಂಧಿಸಿದಂತೆ ಇದುವರೆಗೆ ಮೂವರು ಪ್ರಮುಖ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳನ್ನು ಸೆರೆ ಹಿಡಿಯಲು ಮುಂದಾದಾಗ ಅವರು ಓಡಿ ಹೋಗಲು ಯತ್ನಿಸಿದ್ದು, ಈ ವೇಳೆ ಗಾಯಗೊಂಡಿದ್ದಾರೆ. ಸದ್ಯಕ್ಕೆ ಮೂವರಿಗೆ ಚಿಕಿತ್ಸೆ ಆಸ್ಪತ್ರೆಯಲ್ಲಿ ನೀಡಲಾಗುತ್ತಿದೆ. ಎಫ್‌ಐಆರ್‌ನಲ್ಲಿ ಒಟ್ಟು 10 ಮಂದಿ ಹೆಸರಿದ್ದು, ಉಳಿದವರ ಬಂಧನಕ್ಕೆ ಪ್ರಯತ್ನಿಸುತ್ತಿದ್ದೇವೆ ಎಂದು ಬಾರ ಐಜಿ ಎಸ್ ಪರಿಮಳಾ ತಿಳಿಸಿದ್ದಾರೆ. ಹಾಗೆಯೇ, ಸಂತ್ರಸ್ತೆ ಹಾಗೂ ಆರೋಪಿಗಳು ಬುಡಕಟ್ಟು ಸಮುದಾಯಕ್ಕೆ ಸೇರಿದವರು ಎಂದು ತಿಳಿದು ಬಂದಿದೆ.

ಕಳೆದ ವರ್ಷ ವಿವಾಹವಾಗಿದ್ದ ಮಹಿಳೆ, ನೆರೆಹೊರೆಯ ಪುರುಷನೊಂದಿಗೆ ಓಡಿಹೋಗಿದ್ದಾಳೆ ಎಂದು ಆರೋಪಿಸಿ ಆಕೆಯ ಪತಿ ಮತ್ತು ಅತ್ತೆ ಥಳಿಸಿದ್ದಾರೆ. ಅಷ್ಟೇ ಅಲ್ಲದೆ, ಆಕೆಯನ್ನು ವಿವಸ್ತ್ರಗೊಳಿಸಿ ಗ್ರಾಮದಲ್ಲಿ ಮೆರವಣಿಗೆ ಮಾಡಿದ್ದಾರೆ ಎನ್ನಲಾಗಿದೆ. ಘಟನೆ ಸಂಬಂಧ ಎಫ್‌ಐಆರ್ ದಾಖಲಾಗಿದ್ದು, ತನಿಖೆಗಾಗಿ ಆರು ಪೊಲೀಸ್ ತಂಡಗಳನ್ನು ರಚಿಸಲಾಗಿದೆ.

ಈ ಬಗ್ಗೆ ಟ್ವೀಟ್‌ ಮಾಡಿದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಪ್ರತಾಪಗಢ ಜಿಲ್ಲೆಯಲ್ಲಿ ಪತಿ ಮತ್ತು ಅತ್ತೆ-ಮಾವನ ನಡುವಿನ ಕೌಟುಂಬಿಕ ಕಲಹದಲ್ಲಿ ಮಹಿಳೆಯನ್ನು ಆಕೆಯ ಅತ್ತೆ-ಮಾವ ಬೆತ್ತಲೆಗೊಳಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ನಾಗರಿಕ ಸಮಾಜದಲ್ಲಿ ಇಂತಹ ಅಪರಾಧಿಗಳಿಗೆ ಸ್ಥಳವಿಲ್ಲ ಎಂದು ಹೇಳಿದ್ದಾರೆ. ಅಲ್ಲದೆ, ಆರೋಪಿಗಳನ್ನು ಶೀಘ್ರವಾಗಿ ಬಂಧಿಸಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದಿದ್ದಾರೆ.

- Advertisement -

Related news

error: Content is protected !!