- Advertisement -
- Advertisement -
ಕಾರ್ಕಳ: ಮನೆಯಲ್ಲಿ ವೇಶ್ಯಾವಾಟಿಕೆ ದಂಧೆಯನ್ನು ನಡೆಸುತ್ತಿದ್ದ ಆರೋಪಿಗಳಿಬ್ಬರನ್ನು ಪೊಲೀಸರು ಬಂಧಿಸಿದ ಘಟನೆ ಸಾಣೂರು ಗ್ರಾಮದಲ್ಲಿ ನಡೆದಿದೆ.
ಅನೈತಿಕ ದಂಧೆ ನಡೆಯುತ್ತಿದೆ ಎಂಬ ಮಾಹಿತಿ ಮೇರೆಗೆ ಪೊಲೀಸರು ದಾಳಿ ಸಾಣೂರು ಗ್ರಾಮದ ಅವಿನಾಶ್ ಕಂಪೌಂಡ್ ಬಳಿ ಇರುವ ಮನೆಯೊಂದಕ್ಕೆ ನಡೆಸಿದ್ದಾರೆ. ಈ ವೇಳೆ ಮನೆಯಲ್ಲಿದ್ದ ಭರತ್ ಎಂಬುವವರನ್ನು ಬಂಧಿಸಲಾಗಿದ್ದು, ಕೃತ್ಯಕ್ಕೆ ಬಳಸಿಕೊಳ್ಳಲಾಗುತ್ತಿದ್ದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.
ದಾಳಿ ವೇಳೆ ಓರ್ವ ಸಂತ್ರಸ್ತೆಯನ್ನು ರಕ್ಷಿಸಲಾಗಿದೆ. ಆರೋಪಿಗಳನ್ನು ಭರತ್ ಕುಮಾರ್, ಮನೆಯ ಮಾಲಕಿ ಪ್ರಮೀಳಾ ವಿಜಯ್ ಕುಮಾರ್ ಸೇರಿ ವೇಶ್ಯಾವಾಟಿಕೆ ನಿರ್ವಹಿಸುತ್ತಿದ್ದರು ಎನ್ನಲಾಗಿದೆ. ಈ ಬಗ್ಗೆ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -