Monday, June 15, 2026
spot_imgspot_img
spot_imgspot_img

ಮಹದೇಶ್ವರ ಬೆಟ್ಟದಲ್ಲಿ 4 ಹುಲಿಗಳ ಅಸಹಜ ಸಾವು; ತನಿಖೆಗೆ ಈಶ್ವರ ಖಂಡ್ರೆ ಆದೇಶ..!

- Advertisement -
- Advertisement -

ಬೆಂಗಳೂರು/ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಹಾಗೂ ಮೂರು ಮರಿಗಳು ಅಸಹಜವಾಗಿ ಸಾವಿಗೀಡಾಗಿದ್ದು, ಪಿಸಿಸಿಎಫ್ ನೇತೃತ್ವದ ತಂಡದ ತನಿಖೆ ನಡೆಸಬೇಕು ಎಂದು ಪರಿಸರ ಸಚಿವ ಈಶ್ವರ ಖಂಡ್ರೆ ಆದೇಶ ಹೊರಡಿಸಿದ್ದಾರೆ.

ಈ ಬಗ್ಗೆ ದುಃಖ ವ್ಯಕ್ತಪಡಿಸಿದ ಅವರು, ಅಪರ ಮುಖ್ಯ ಕಾರ್ಯದರ್ಶಿಗಳು ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಲಿಖಿತ ಸೂಚನೆ ನೀಡಿದ್ದಾರೆ. ಕಾನನದಲ್ಲಿ 4 ಹುಲಿಗಳು ಸಾವಿಗೀಡಾಗಿರುವುದನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸೂಚಿಸಿದ್ದಾರೆ.

ಅಳಿವಿನಂಚಿನಲ್ಲಿರುವ ಹುಲಿಗಳ ಸಂರಕ್ಷಣೆಗೆ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಹುಲಿ ಯೋಜನೆ (ಪ್ರಾಜೆಕ್ಟ್ ಟೈಗರ್) ಆರಂಭಿಸಿದ ತರುವಾಯ ರಾಜ್ಯದಲ್ಲಿಯೂ ಹುಲಿಗಳ ಸಂರಕ್ಷಣೆಗೆ ಕ್ರಮ ವಹಿಸಲಾಗಿದೆ. 563 ಹುಲಿಗಳೊಂದಿಗೆ ಕರ್ನಾಟಕ ದೇಶದಲ್ಲೇ 2ನೇ ಸ್ಥಾನದಲ್ಲಿದೆ. ಹುಲಿ ಸಂರಕ್ಷಣೆಗೆ ಹೆಸರಾಗಿರುವ ರಾಜ್ಯದಲ್ಲಿ, ಒಂದೇ ದಿನ 4 ಹುಲಿಗಳು ಅಸಹಜ ಸಾವಿಗೀಡಾಗಿರುವುದು ಅತ್ಯಂತ ನೋವು ತಂದಿದೆ ಎಂದು ತಿಳಿಸಿದ್ದಾರೆ.

ಕೂಡಲೇ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ನೇತೃತ್ವದಲ್ಲಿ ತಂಡ ರಚಿಸಿ, ಸ್ಥಳ ತನಿಖೆ ಕೈಗೊಂಡು, ಅರಣ್ಯ ಸಿಬ್ಬಂದಿ ನಿರ್ಲಕ್ಷ್ಯ ಇದ್ದರೆ ಅವರ ವಿರುದ್ಧ ಅಥವಾ ವಿದ್ಯುತ್ ಸ್ಪರ್ಶ, ವಿಷ ಪ್ರಾಷನ ಇತ್ಯಾದಿ ಸಾವಿಗೆ ಕಾರಣವಾಗಿದ್ದರೆ ಅದಕ್ಕೆ ಕಾರಣರಾದವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ, ಕ್ರಮ ವಹಿಸುವಂತೆ ಸೂಚಿಸಿದ್ದಾರೆ ಹಾಗೂ 3 ದಿನಗಳ ಒಳಗಾಗಿ ವರದಿಯನ್ನು ಸಲ್ಲಿಸುವಂತೆ ಆದೇಶ ನೀಡಿದ್ದಾರೆ.

- Advertisement -

Related news

error: Content is protected !!