Monday, May 6, 2024
spot_imgspot_img
spot_imgspot_img

ವಿಧಾನಸಭಾ ಕಲಾಪದ ವೇಳೆ ಅಶಿಸ್ತಿನ ವರ್ತನೆ; ಕರಾವಳಿ ಶಾಸಕರಾದ ಸುನಿಲ್ ಕುಮಾರ್, ‌ಯಶ್‌ಪಾಲ್‌, ಕಾಮತ್, ಉಮಾನಾಥ್, ಭರತ್ ಶೆಟ್ಟಿ ಸಹಿತ 10 ಬಿಜೆಪಿ ಶಾಸಕರ ಅಮಾನತುಗೊಳಿಸಿದ ಸ್ಪೀಕರ್ ಖಾದರ್

- Advertisement -G L Acharya panikkar
- Advertisement -

ವಿಧಾನಸಭಾ ಕಲಾಪದ ವೇಳೆ ಅಶಿಸ್ತಿನ ವರ್ತನೆ ತೋರಿ, ಸದನಕ್ಕೆ ಅಗೌರವ ತೋರಿದ ಕಾರಣಕ್ಕೆ ಬಿಜೆಪಿಯ ಹತ್ತು ಮಂದಿ ಶಾಸಕರನ್ನು ಈ ವಿಧಾನಸಭಾ ಅಧಿವೇಶನ ಮುಗಿಯುವವರೆಗೆ ಸ್ಪೀಕರ್ ಯು.ಟಿ.ಖಾದರ್ ಅವರು ಅಮಾನತು ಮಾಡಿದ್ದಾರೆ. ಅಧಿವೇಶನ ಶುಕ್ರವಾರ (ಜುಲೈ 21 ) ಕೊನೆಗೊಳ್ಳಲಿದೆ.

ಅಮಾನತಿಗೊಳಗಾದ ಶಾಸಕರು ಆರ್.ಅಶೋಕ್, ಆರಗ ಜ್ಞಾನೇಂದ್ರ, ವಿ.ಸುನಿಲ್ ಕುಮಾರ್, ಅರವಿಂದ ಬೆಲ್ಲದ್, ಧೀರಜ್ ಮುನಿರಾಜು, ಭರತ್ ಶೆಟ್ಟಿ, ಡಾ. ಅಶ್ವತ್ಥ ನಾರಾಯಣ, ಉಮಾನಾಥ ಕೋಟ್ಯಾನ್, ಯಶ್ ಪಾಲ್ ಸುವರ್ಣ, ವೇದವ್ಯಾಸ ಕಾಮತ್ ಅವರು ಸೇರಿದ್ದಾರೆ.

ಮಧ್ಯಾಹ್ನದ ಅಧಿವೇಶನ ಆರಂಭವಾದ ಬೆನ್ನಲ್ಲೇ ವಿಧಾನಸಭಾ ಉಪಾಧ್ಯಕ್ಷ ರುದ್ರಪ್ಪ ಲಮಾಣಿ ಅವರು ಸಭೆಯನ್ನು ನಡೆಸಿಕೊಡುವಾಗ ಸರ್ಕಾರದ ಬಿಲ್‌ ಪ್ರತಿಯೊಂದನ್ನು ಬಿಜೆಪಿಯ ಹತ್ತಕ್ಕೂ ಅಧಿಕ ಶಾಸಕರು ಹರಿದು ಸ್ಪೀಕರ್‌ ಮೇಲೆ ಎಸೆದಿದ್ದಾರೆ. ಇನ್ನು ವಿಧಾನಸಭಾ ಅಧಿವೇಶನದಲ್ಲಿ ಅಶಿಸ್ತಿನಿಂದ ನಡೆದುಕೊಮಡಿ ಹಿನ್ನೆಲೆಯಲ್ಲಿ ಬಿಜೆಪಿಯ 10 ಶಾಸಕರನ್ನು ಅಧಿವೇಶನ ಮುಗಿಯುವವರೆಗೂ ಅಮಾನತುಗೊಳಿಸಲಾಗಿದೆ. ಇನ್ನು ಇದರ ಬೆನ್ನಲ್ಲೇ ಶಾಸಕರನ್ನು ಅಧಿವೇಶನದಿಂದ ಹೊರ ಹಾಕಲಾಗಿದೆ. ಕಾಂಗ್ರೆಸ್ ಶಾಸಕರು ಮತ್ತು ಸಚಿವರು ದಲಿತ ಸಮುದಾಯಕ್ಕೆ ಸೇರಿದ ಉಪಸಭಾಪತಿ ಅವರ ವಿರುದ್ಧ ಈ ರೀತಿ ವರ್ತನೆ ಸರಿಯಲ್ಲ ಎಂದು ಕಿಡಿ ಕಾರಿದ್ದಾರೆ.

- Advertisement -

Related news

error: Content is protected !!