Friday, June 19, 2026
spot_imgspot_img
spot_imgspot_img

ಸುಳ್ಯ: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಕಾಣಿಸಿಕೊಂಡ ಬೆಂಕಿ; ತಪ್ಪಿದ ಅನಾಹುತ..!

- Advertisement -
- Advertisement -

ಸುಳ್ಯ: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾದ ಘಟನೆ ಸುಳ್ಯ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ನಡೆದಿದೆ.

ಸುಳ್ಯದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ಕೊಯನಾಡು ಭಾಗಕ್ಕೆ ತೆರಳಬೇಕಾಗಿದ್ದ ಬಸ್‌ನಲ್ಲಿ ಮೊದಲಿಗೆ ದಟ್ಟ ಹೊಗೆ ಕಾಣಿಸಿಕೊಂಡು, ಬೆಂಕಿ ಕಾಣಿಸಿಕೊಂಡಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಶಂಕಿಸಲಾಗಿದೆ.

ಘಟನೆ ಸಂಭವಿಸಿದ ತಕ್ಷಣ ಬಸ್‌ನಲ್ಲಿದ್ದ ಪ್ರಯಾಣಿಕರನ್ನು ಕೆಳಕ್ಕೆ ಇಳಿಸಲಾಯಿತು. ಘಟನಾ ಸ್ಥಳಕ್ಕೆ ಆಗಮಿಸಿದ ಸುಳ್ಯದ ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿ, ಸಂಭಾವ್ಯ ಅಪಾಯ ತಪ್ಪಿಸಿದ್ದಾರೆ.

- Advertisement -

Related news

error: Content is protected !!