Thursday, June 18, 2026
spot_imgspot_img
spot_imgspot_img

ಸುಳ್ಯ: ಮಣ್ಣು ತೆರವು ಕಾರ್ಯಚರಣೆ ಪೂರ್ಣ; ಮಂಗಳೂರು-ಬೆಂಗಳೂರು ರೈಲು ಸಂಚಾರ ಮತ್ತೆ ಆರಂಭ..!

- Advertisement -
- Advertisement -

ಸುಳ್ಯ: ಸಕಲೇಶಪುರ-ಬಾಳ್ಳುಪೇಟೆ ನಡುವಿನ ಮಂಗಳೂರು-ಬೆಂಗಳೂರು ರೈಲು ಹಳಿ ಮೇಲೆ ಗುಡ್ಡ ಕುಸಿತದಿಂದ ಬಿದ್ದಿರುವ ಮಣ್ಣು ತೆರವು ಕಾರ್ಯ ಸಂಪೂರ್ಣಗೊಂಡಿದ್ದು, ರೈಲು ಸಂಚಾರ ಮತ್ತೆ ಆರಂಭಗೊಂಡಿದೆ.

ರೈಲು ಮಾರ್ಗಕ್ಕೆ ಬಿದ್ದಿದ್ದ ಮಣ್ಣನ್ನು ತೆರವು ಮಾಡುವ ಕಾರ್ಯವು ಸೋಮವಾರ ಸಂಜೆಗೆ ಪೂರ್ಣಗೊಂಡಿದೆ. ರೈಲು ಮಾರ್ಗವನ್ನು ರೈಲುಗಳ ಸಂಚಾರಕ್ಕೆ ಮುಕ್ತವಾಗುವಂತೆ ಮತ್ತೆ ಮರು ಹೊಂದಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ವಾರದ ಹಿಂದೆ ಗುಡ್ಡ ಕುಸಿದಿದ್ದ ಜಾಗದಲ್ಲಿ ಶುಕ್ರವಾರ ಮತ್ತೆ ಮಣ್ಣು ಕುಸಿದಿತ್ತು. ಇದೇ ಕಾರಣಕ್ಕೆ ರೈಲು ಸಂಚಾರವನ್ನು ಮತ್ತೊಮ್ಮೆ ಸ್ಥಗಿತಗೊಳಿಸಲಾಗಿತ್ತು. ಮೂರು ದಿನಗಳಿಂದ ಮಣ್ಣು ತೆರವು ಕಾರ್ಯ ನಡೆಯುತ್ತಿದ್ದು, ರೈಲು ಸೇವೆಗಳು ಮತ್ತೆ ಪ್ರಾರಂಭವಾಗಿದೆ. ಮುಂದೆ ಎಲ್ಲಾ ರೈಲುಗಳು ನಿಗದಿತ ದಿನಾಂಕ ಹಾಗೂ ಸಮಯದ ಅನುಸಾರ ಸಂಚರಿಸಲಿದ್ದು, ಮಣ್ಣು ಕುಸಿದ ಸ್ಥಳದಲ್ಲಿ ರೈಲು ಸಂಚಾರದ ವೇಗಕ್ಕೆ ಮಿತಿ ಹೇರಲಾಗಿದೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!