Thursday, May 2, 2024
spot_imgspot_img
spot_imgspot_img

ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸು ಪಲ್ಟಿ; ಇಬ್ಬರಿಗೆ ಗಾಯ

- Advertisement -G L Acharya panikkar
- Advertisement -

ಉಪ್ಪಿನಂಗಡಿ: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಗೆ ಮಗುಚಿ ಬಿದ್ದು ನಾಲ್ವರು ಗಾಯಗೊಂಡ ಘಟನೆ ಉಪ್ಪಿನಂಗಡಿ ಸಮೀಪದ ಶಿರಾಡಿ ಎಂಬಲ್ಲಿ ನಡೆದಿದೆ.

ಬೆಂಗಳೂರಿನಿಂದ ಮಂಗಳೂರಿಗೆ ಪ್ರಯಾಣಿಕರನ್ನು ಕರೆ ತರುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಶಿರಾಡಿಯ ಪೆಟ್ರೋಲ್ ಪಂಪು ಬಳಿ ಹೆದ್ದಾರಿ ಬದಿಗೆ ಮಗುಚಿ ಬಿದ್ದಿದೆ. ಘಟನೆಯಲ್ಲಿ ಸಕಲೇಶಪುರ ನಿವಾಸಿ ಇಲ್ಯಾಸ್ (30), ಮಹಮ್ಮದ್ ರಾಶೀಖ್ (19) ಬಸ್ ನಿರ್ವಾಹಕ ಮುಸ್ತಾಫ ಹಾಗೂ ಬಸ್ ಚಾಲಕ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!