Friday, April 26, 2024
spot_imgspot_img
spot_imgspot_img

ಉಪ್ಪಳ: ಯುವಕನ ಮೇಲೆ ತಲವಾರು ದಾಳಿ!

- Advertisement -G L Acharya panikkar
- Advertisement -

ಉಪ್ಪಳ: ಯುವಕನೋರ್ವನ ಮೇಲೆ ತಂಡವೊಂದು ತಲವಾರು ದಾಳಿ ನಡೆಸಿ ಗಾಯಗೊಳಿಸಿದ ಘಟನೆ ಉಪ್ಪಳ ಪೇಟೆಯಲ್ಲಿ ನಡೆದಿದೆ.

ಉಪ್ಪಳ ನಿವಾಸಿ ಮುಹಮ್ಮದ್ ಹರ್ಶಿದ್(33) ಗಾಯಗೊಂಡವರು. ಅವರನ್ನು ಕುಂಬಳೆಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಪತ್ನಿ ಮತ್ತು ಮಕ್ಕಳ ಜೊತೆ ಉಪ್ಪಳ ಪೇಟೆಗೆ ಬಂದಿದ್ದ ಸಂದರ್ಭದಲ್ಲಿ ಈ ಕೃತ್ಯ ಎಸಗಲಾಗಿದೆ.

ಹರ್ಶಿದ್ ಅಂಗಡಿಯಿಂದ ಸಾಮಗ್ರಿ ಖರೀದಿಸುತ್ತಿದ್ದ ಸಂದರ್ಭದಲ್ಲಿ ಮೂವರ ತಂಡ ದಾಳಿ ನಡೆಸಿ, ತಲವಾರಿನಿಂದ ಕಡಿದು ಪರಾರಿಯಾಗಿದೆ ಎನ್ನಲಾಗಿದೆ. ಕೃತ್ಯಕ್ಕೆ ಕಾರಣ ತಿಳಿದುಬಂದಿಲ್ಲ.

ಈ ಬಗ್ಗೆ ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!