ಉಪ್ಪಿನಂಗಡಿ: ಸಂಗಮ ಕ್ಷೇತ್ರವೆಂದೇ ಪ್ರಸಿದ್ಧಿ ಹೊಂದಿರುವ ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಸಂಗಮವನ್ನು ಕಣ್ತುಂಬಿಕೊಳ್ಳಲು ಜನರು ಕಾತುರದಿಂದ ಕಾದಿದ್ದರು
ನಿನ್ನೆಯಿಂದ ಸುರಿಯುತ್ತಿರುವ ಮಳೆಯ ಅಬ್ಬರಕ್ಕೆ ಇಲ್ಲಿಯ ಜೀವನದಿಗಳಾದ ನೇತ್ರಾವತಿ ಮತ್ತು ಕುಮಾರದಾರ ನದಿಗಳ ನದಿ ನೀರಿನ ಹರಿವು ಅಪಾಯದ ಮಟ್ಟವನ್ನು ಮೀರಿ ಮೈದುಂಬಿ ಹರಿಯುತ್ತಿದೆ.
ಕಳೆದ ಎರಡು ದಿನಗಳಿಂದ ನೀರಿನ ಮಟ್ಟದಲ್ಲಿ ಏರುಗತಿ ದಾಖಲಾಗಿದೆ. ನಿನ್ನೆ ಸಂಜೆಗೆ ಜೀವನದಿಗಳ ಸಂಗಮ ಸ್ಥಾನವಾದ ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಳದ ಬಳಿ ನದಿ ನೀರಿನ ಮಟ್ಟ ಅಪಾಯದ ಮಟ್ಟ ದಾಟಿದೆ.
ಇಂದು(ಜು.30) ನೀರು ದೇವಳದ ಅಂಗಣ ಪ್ರವೇಶಿಸಿ , ಎರಡೂ ನದಿಗಳ ನೀರು ದೇವಳದ ಎರಡೂ ಭಾಗಗಳಿಂದ ಆವರಿಸಿ ಕೊನೆಗೂ ಸಂಜೆ 7.30ರ ಹೊತ್ತಿಗೆ ಸಂಗಮವನ್ನು ಜನರು ಕಣ್ತುಂಬಿಕೊಂಡಿದ್ದಾರೆ,ಸಾವಿರಾರು ಭಕ್ತರ ಸಮ್ಮುಖದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಬಾಗಿನ ಅರ್ಪಿಸಿದರು.. ಸದ್ಯ ಯಾರನ್ನು ನದಿಯ ಭಾಗಕ್ಕೆ ಹೋಗದಂತೆ ಎಚ್ಚರಿಕೆ ಫಲಕಗಳನ್ನು ಹಾಕಲಾಗಿದೆ. ಜೊತೆಗೆ ಎನ್ ಡಿ ಆರ್ ಎಫ್, ಹೋಂಗಾರ್ಡ್, ಅಗ್ನಿಶಾಮಕ ದಳದವರು ಸ್ಥಳದಲ್ಲೇ ಬೀಡು ಬಿಟ್ಟಿದ್ದಾರೆ.