- Advertisement -
- Advertisement -


ಉಪ್ಪಿನಂಗಡಿ: ಮಾದಕ ವಸ್ತು ಸೇವನೆ ಮಾಡಿ ಸಾರ್ವಜನಿಕ ಸ್ಥಳದಲ್ಲಿ ಅನುಚಿವಾಗಿ ವರ್ತಿಸುತ್ತಿದ್ದ ವ್ಯಕ್ತಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಅಮಲು ಪದಾರ್ಥ ಸೇವನೆ ಮಾಡಿದ ವ್ಯಕ್ತಿಯನ್ನು ಬೆಳ್ತಂಗಡಿ ಇಳಂತಿಲ ಗ್ರಾಮದ ನಿವಾಸಿ ಮಹಮ್ಮದ್ ಶಾಫಿ(30) ಎನ್ನಲಾಗಿದೆ.
ಉಪ್ಪಿನಂಗಡಿ ಸಿ ಎ ಬ್ಯಾಂಕ್ ಬಳಿ ಆರೋಪಿ ಮಹಮ್ಮದ್ ಶಾಫಿ ಅಮಲು ಪದಾರ್ಥ ಸೇವನೆ ಮಾಡಿ ಅನುಚಿತವಾಗಿ ವರ್ತಿಸುತ್ತಿದ್ದ. ಉಪ್ಪಿನಂಗಡಿ ಪೊಲೀಸರು ವಿಚಾರಿಸಿದಾಗ ಮಾದಕದ್ರವ್ಯ ಗಾಂಜಾ ಸೇವನೆ ಮಾಡಿರುವುದನ್ನು ಒಪ್ಪಿಕೊಂಡಿದ್ದು, ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ.
ಬಂಧಿತ ವ್ಯಕ್ತಿಯಿಂದ ಅಂದಾಜು 5,000/-ಮೌಲ್ಯದ ಮೊಬೈಲ್‌ನನ್ನು ವಶ ಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -