


ಉಪ್ಪಿನಂಗಡಿ: ಪುತ್ತೂರು ತಾಲೂಕು ನೆಕ್ಕಿಲಾಡಿ ಗ್ರಾಮದ ನೆಕ್ಕಿಲಾಡಿ ಜಂಕ್ಷನ್ ಬಳಿ ಉಪ್ಪಿನಂಗಡಿ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ಅವಿನಾಶ್ ಹೆಚ್ ಮತ್ತು ಸಿಬ್ಬಂದಿಗಳು ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಅದೇ ಮಾರ್ಗವಾಗಿ ಬಂದ ಆಟೋರಿಕ್ಷಾವೊಂದರಲ್ಲಿ ನಿಷೇದಿತ ಎಂ.ಡಿ.ಎಂ.ಎ ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸ್ ವಶಕ್ಕೆ ಪಡೆದಿದ್ದಾರೆ.
ಆರೋಪಿಗಳನ್ನು ಗಡಿಯಾರ, ಕೆದಿಲ ಗ್ರಾಮ, ಬಂಟ್ವಾಳ ತಾಲೂಕು ನಾಸೀರ್ (24), ಏನಾಜೆ ಬುಡೋಳಿ , ಪೆರಾಜೆ ಗ್ರಾಮ, ಬಂಟ್ವಾಳ ತಾಲೂಕು, ಮಹಮ್ಮದ್ ಆಸೀಫ್ .ಬಿ (21), ಸಿನಾನ್ ಎಂದು ಗುರುತಿಸಲಾಗಿದೆ.
ಉಪ್ಪಿನಂಗಡಿ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ಅವಿನಾಶ್ ಹೆಚ್ ಮತ್ತು ಸಿಬ್ಬಂದಿಗಳು ಬೆಳಿಗ್ಗೆ, ಪುತ್ತೂರು ತಾಲೂಕು ನೆಕ್ಕಿಲಾಡಿ ಗ್ರಾಮದ ನೆಕ್ಕಿಲಾಡಿ ಜಂಕ್ಷನ್ ಬಳಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಅದೇ ಮಾರ್ಗವಾಗಿ ಬಂದ ಅಟೋರಿಕ್ಷಾವನ್ನು ತಪಾಸಣೆಗಾಗಿ ನಿಲ್ಲಿಸಿದ್ದು, ರಿಕ್ಷಾ ನಿಲ್ಲಿಸದೇ ಮುಂದಕ್ಕೆ ಚಲಾಯಿಸಿ, ವಾಹನವನ್ನು ರಸ್ತೆಯ ಬದಿಯಲ್ಲಿ ನಿಲ್ಲಿಸಿ ವಾಹನದಲ್ಲಿದ್ದ ಚಾಲಕ ಮತ್ತು ಹಿಂದಿನ ಸೀಟಿನಲ್ಲಿದ್ದ ವ್ಯಕ್ತಿಯು ವಾಹನದಿಂದ ಇಳಿದು ಪರಾರಿಯಾಗಲು ಪ್ರಯತ್ನಿಸಿರುತ್ತಾರೆ. ಈ ವೇಳೆ ಆಪಾದಿತರುಗಳನ್ನು ಹಿಡಿದು ವಿಚಾರಿಸಿದ್ದು, ಸಮರ್ಪಕವಾದ ಉತ್ತರ ನೀಡದಿರುವ ಹಿನ್ನೆಲೆ ವಾಹನದ ದಾಖಲಾತಿಗಳನ್ನು ಹಾಗೂ ವಾಹನವನ್ನು ತಪಾಸಣೆ ನಡೆಸಿದಾಗ, ಅಟೋರಿಕ್ಷಾದಲ್ಲಿದ್ದ ಸುಮಾರು 18,720 ರೂ ಮೌಲ್ಯದ 9.36 ಗ್ರಾಂ ನಿಷೇದಿತ ಎಂ.ಡಿ.ಎಂ.ಎ ಮಾದಕ ವಸ್ತು ಮತ್ತು 15 ಚಿಕ್ಕ ಚಿಕ್ಕ ಪ್ಲಾಸ್ಟಿಕ್ ಕವರ್ಗಳು ಪತ್ತೆಯಾಗಿರುತ್ತದೆ.
ಮುಂದಿನ ಕಾನೂನು ಕ್ರಮಕ್ಕಾಗಿ ಮಾದಕ ವಸ್ತುವನ್ನು , ಅಟೋರಿಕ್ಷಾವನ್ನು ಹಾಗೂ ಆರೋಪಿಗಳನ್ನು ವಶಕ್ಕೆ ಪಡೆದು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 94/2024 ಕಲಂ: U/s 8(c) 22(b) ಎನ್.ಡಿ.ಪಿ.ಎಸ್ ಕಾಯ್ದೆ ಮತ್ತು ಕಲಂ: 3(5) BNS 2023 ರಂತೆ ಪ್ರಕರಣ ದಾಖಲಿಸಲಾಗಿರುತ್ತದೆ.