Sunday, September 27, 2026
spot_imgspot_img
spot_imgspot_img

ಉಪ್ಪಿನಂಗಡಿ: ಬೈಕ್-ಟ್ಯಾಂಕರ್ ಲಾರಿ ಮುಖಾಮುಖಿ ಡಿಕ್ಕಿ; ಬೈಕ್ ಸವಾರ ಮೃತ್ಯು

- Advertisement -
- Advertisement -

ಉಪ್ಪಿನಂಗಡಿ: ಬೈಕ್ ಹಾಗೂ ಟ್ಯಾಂಕರ್ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಉಪ್ಪಿನಂಗಡಿಯ ಬಜತ್ತೂರು ಗ್ರಾಮದ ನೀರಕಟ್ಟೆ ಎಂಬಲ್ಲಿ ನಡೆದಿದೆ.

ಪುತ್ತೂರು ತಾಲೂಕು ಕೋಡಿಂಬಾಡಿ ಗ್ರಾಮದ ಕಜೆ ನಿವಾಸಿ, ಗಾರೆ ಮೇಸ್ತ್ರಿ ಕೆಲಸ ಮಾಡುತ್ತಿದ್ದ ಅಣ್ಣು(52) ಮೃತಪಟ್ಟವರು.

ಅಣ್ಣು ಅವರು ಕೋಡಿಂಬಾಡಿಯ ತನ್ನ ಮನೆಯಿಂದ ತಂದೆಯ ತಾಯಿಯನ್ನು ಬೈಕ್‍ನಲ್ಲಿ ಕುಳ್ಳಿರಿಸಿಕೊಂಡು ಗೋಳಿತ್ತೊಟ್ಟಿಗೆ ಬಂದು ಅಲ್ಲಿ ಮೃತಪಟ್ಟಿದ್ದ ಸಂಬಂಧಿಕರೊಬ್ಬರ ಮನೆಗೆ ಹೋಗಿ ಅಲ್ಲಿಂದ ಬೈಕ್‍ನಲ್ಲಿ ಒಬ್ಬರೇ ಮತ್ತೆ ಕೋಡಿಂಬಾಡಿಯ ತನ್ನ ಮನೆಗೆ ಹಿಂದಿರುಗಿ ಬರುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ.

ಅಣ್ಣು ಅವರು ಸವಾರಿ ಮಾಡಿಕೊಂಡು ಬರುತ್ತಿದ್ದ ಬೈಕ್‍ಗೆ ಬಜತ್ತೂರು ಗ್ರಾಮದ ನೀರಕಟ್ಟೆ ಎಂಬಲ್ಲಿ ಬಿ.ಸಿ.ರೋಡ್‍ನಿಂದ ಹಾಸನ ಕಡೆಗೆ ಹೋಗುತ್ತಿದ್ದ ಟ್ಯಾಂಕರ್ ಮುಖಾಮುಖಿ ಢಿಕ್ಕಿ ಹೊಡೆದಿದೆ. ಈ ಸಂದರ್ಭ ಬೈಕ್ ಸವಾರ ರಸ್ತೆಗೆಸೆಯಲ್ಪಟ್ಟಿದ್ದು, ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಟ್ಯಾಂಕರ್ ಲಾರಿ ಚಾಲಕ ನೀಡಿದ ದೂರಿನಂತೆ ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿ ಮೂಲಕ ತಿಳಿದುಬಂದಿದೆ.

- Advertisement -

Related news

error: Content is protected !!