Tuesday, July 21, 2026
spot_imgspot_img
spot_imgspot_img

ಉಪ್ಪಿನಂಗಡಿ: ಬೈಕ್‌ – ಟಿಪ್ಪರ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಮೃತ್ಯು

- Advertisement -
- Advertisement -

ಕಳೆದ ಒಂದು ವಾರದ ಹಿಂದೆ ಮಂಗಳೂರು-ಬೆಂಗಳೂರು ರಾಷ್ಟೀಯ ಹೆದ್ದಾರಿಯ ಉಪ್ಪಿನಂಗಡಿ ಸಮೀಪ ಬೈಕ್ ಹಾಗೂ ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸವಾರ ಚಿಕಿತ್ಸೆ ಫಲಿಸದೇ ಮೃತಪಟ್ಟ ಘಟನೆ ವರದಿಯಾಗಿದೆ.

ಮೃತರನ್ನು ಬೈಕ್ ಸವಾರ ಅನೀಸ್‌ (27) ಎಂದು ಗುರುತಿಸಲಾಗಿದೆ. ಸವಾರಅನೀಸ್‌ ಹಾಗೂ ಆತನ ಮಾವ ಹಮೀದ್ ಎಂಬವರು ಬೈಕಿನಲ್ಲಿ ತೆರಳುತ್ತಿದ್ದ ಸಂದರ್ಭ ಪಂಜಳ ಬಳಿಯಲ್ಲಿ ಅಪಘಾತ ಸಂಭವಿಸಿತ್ತು. ಪರಿಣಾಮ ಗಂಭೀರ ಗಾಯಗೊಂಡ ಅನಿಸ್ ನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಒಂದು ವಾರಗಳ ಕಾಲ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸಿದ ಸವಾರ ನಿನ್ನೆ ರಾತ್ರಿ ಕೊನೆಯುಸಿರೆಳೆದಿದ್ದಾನೆ ಎಂದು ತಿಳಿದುಬಂದಿದೆ. ಈ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!