Tuesday, July 28, 2026
spot_imgspot_img
spot_imgspot_img

ಉಪ್ಪಿನಂಗಡಿ : ಕೋಳಿಅಂಕ ಪ್ರಕರಣ – ಆರೋಪಿ ಸೆರೆ!

- Advertisement -
- Advertisement -

ಉಪ್ಪಿನಂಗಡಿ: ಕಜೆಕ್ಕಾರ್ ಗುಡ್ಡ ಎಂಬಲ್ಲಿ ಹಣವನ್ನು ಪಣವಾಗಿಟ್ಟುಕೊಂಡು ಕೋಳಿ ಅಂಕ ನಡೆಸುತ್ತಿದ್ದ ಪ್ರದೇಶಕ್ಕೆ ಉಪ್ಪಿನಂಗಡಿ ಪೊಲೀಸರು ದಾಳಿ ನಡೆಸಿ ಮೂರು ಕೋಳಿ, ಮೂರು ದ್ವಿ-ಚಕ್ರವಾಹನಗಳ ಸಹಿತ ಓರ್ವನನ್ನು ಬಂಧಿಸಿದ ಘಟನೆ ವರದಿಯಾಗಿದೆ.

ಬಂಧಿತನನ್ನು ಉರುವಾಲು ಗ್ರಾಮದ ನೋಣಯ್ಯ ಮುಗೇರ ಎಂದು ಗುರುತಿಸಲಾಗಿದೆ. ಘಟನಾ ಸ್ಥಳದಿಂದ ಪೊಲೀಸ್ ದಾಳಿಯ ವೇಳೆ ಪರಾರಿಯಾದವರನ್ನು ವಿಜಯ ಕಜೆಕ್ಕಾರ್, ರವಿ ಕಜೆಕ್ಕಾರ್, ಉದಯ ಪೆರಿಯಡ್ಕ ಮತ್ತು ಇತರ ಇಬ್ಬರು ಎಂದು ಗುರುತಿಸಲಾಗಿದೆ.
ಬಂಧಿತನಿಂದ ಕೋಳಿ ಅಂಕಕ್ಕೆ ಬಳಸಲಾಗುತ್ತಿರುವ ಸಲಕರಣೆಗಳನ್ನು ಜೂಜಿಗೆ ಬಳಸಲಾಗಿದ್ದ ನಗದು ಹಣವನ್ನು ವಶಪಡಿಸಿಕೊಂಡಿದ್ದು, ಪೊಲೀಸ್ ಉಪ ನಿರೀಕ್ಷಕ ಸುರೇಶ್ ಸಿ ಟಿ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.

- Advertisement -

Related news

error: Content is protected !!