Sunday, April 28, 2024
spot_imgspot_img
spot_imgspot_img

ಉಪ್ಪಿನಂಗಡಿ : ಕ್ಷುಲ್ಲಕ ಕಾರಣಕ್ಕೆ ಹೊಡೆದಾಟ; 8 ವಿದ್ಯಾರ್ಥಿಗಳ ವಿರುದ್ದ ಪ್ರಕರಣ ದಾಖಲು

- Advertisement -G L Acharya panikkar
- Advertisement -

ಉಪ್ಪಿನಂಗಡಿ : ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದ ಘಟನೆ ಉಪ್ಪಿನಂಗಡಿ ಬಸ್ ನಿಲ್ದಾಣ ಪರಿಸರದಲ್ಲಿ ನಡೆದಿದೆ. ಇದೀಗ 8 ಮಂದಿ ವಿದ್ಯಾರ್ಥಿಗಳ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ಸಂಘರ್ಷ ನಿರತ ವಿದ್ಯಾರ್ಥಿಗಳ ಗುಂಪನ್ನು ಕರ್ತವ್ಯದಲ್ಲಿದ್ದ ಪೊಲೀಸರು ಸಮಾಧಾನ ಪಡಿಸಿ ಚದುರಿಸಲು ಯತ್ನಿಸಿದರೂ, ಅದನ್ನು ಲೆಕ್ಕಿಸದೆ ಹೊಡೆದಾಟದಲ್ಲಿ ತೊಡಗಿದ್ದರು. ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಾದ ಗಿರೀಶ್, ಅಭಿಷಿತ್, ಧನುಷ್, ಮೋಹನ್, ನಂದನ್, ವಿನ್ಯಾಸ್, ರೂಪೇಶ್, ಹಿತೇಶ್ ಎಂಬವರನ್ನು ವಶಕ್ಕೆ ಪಡೆದು ಅವರ ವಿರುದ್ದ ಸಾರ್ವಜನಿಕ ಶಾಂತಿಭಂಗದ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ.

- Advertisement -

Related news

error: Content is protected !!