Thursday, July 23, 2026
spot_imgspot_img
spot_imgspot_img

ಉಪ್ಪಿನಂಗಡಿ: ಐರಾವತ ಬಸ್‌ನಲ್ಲಿ ಕಾಣಿಸಿಕೊಂಡ ಬೆಂಕಿ; ತಪ್ಪಿದ ಅನಾಹುತ..!

- Advertisement -
- Advertisement -

ಉಪ್ಪಿನಂಗಡಿ: ಕೆಎಸ್‌ಆರ್‌ಟಿಸಿ ಸಂಸ್ಥೆಯ ಐರಾವತ ಬಸ್ಸೊಂದಕ್ಕೆ ಬೆಂಕಿ ಹಿಡಿದ ಉಪ್ಪಿನಂಗಡಿಯ ಹಳೆಗೇಟು ಬಳಿ ನಡೆದಿದೆ. ಸ್ಥಳೀಯ ಯುವಕರ ಸಕಾಲಿಕ ಪ್ರಯತ್ನದಿಂದ ಬೆಂಕಿ ಆರಿಸಿದ ಕಾರಣ ಸಂಭವಿಸಬಹುದಾಗಿದ್ದ ಹೆಚ್ಚಿನ ಅನಾಹುತ ತಪ್ಪಿದೆ.

ಬೆಂಗಳೂರಿನಿಂದ – ಮಂಗಳೂರಿಗೆ ಆಗಮಿಸುತ್ತಿದ್ದ ಐರಾವತ ಬಸ್ಸಿನ ಹಿಂಬದಿ ಎಸಿಗೆ ಬೆಂಕಿ ಹತ್ತಿಕೊಂಡಿದ್ದು, ಇದನ್ನು ಗಮನಿಸಿದ ಚಾಲಕ ಹಳೆಗೇಟು ಬಳಿ ಬಸ್ಸನ್ನು ನಿಲ್ಲಿಸಿದ್ದಾನೆ. ಆಗ ಪ್ರಯಾಣಿಕರೆಲ್ಲರೂ ಬಸ್ಸಿನಿಂದ ಇಳಿದಿದ್ದಾರೆ. ಕೂಡಲೇ ಸ್ಥಳದಲ್ಲಿದ್ದ ಉಪ್ಪಿನಂಗಡಿ ಗ್ರಾ.ಪಂ. ಸಿಬ್ಬಂದಿ ಇಸಾಕ್, ಇಟ್ಬಾಲ್, ಸ್ಥಳೀಯರಾದ ಜಾಯಿ, ಸ್ನೇಕ್ ಝಕರಿಯಾ, ಸಿದ್ದೀಕ್ ಕೊಪ್ಪಳ ಸೇರಿದಂತೆ ಅಟೋ ಚಾಲಕರು ರಸ್ತೆಯಲ್ಲಿದ್ದ ಕೆಸರು, ಮಣ್ಣು ನೀರನ್ನು ಬಸ್ಸಿಗೆ ಎರಚಿ ಬೆಂಕಿಯನ್ನು ಹತೋಟಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ಬಸ್ಸಿನ ಹಿಂಬದಿಗೆ ಹಾನಿಯಾಗಿದೆ.

ಮಳೆಗಾಲದ ಈ ಸಂದರ್ಭದಲ್ಲಿ ರಸ್ತೆಯಲ್ಲಿದ್ದ ಹೊಂಡ- ಗುಂಡಿಯಲ್ಲಿ ನೀರು ತುಂಬಿದ್ದರಿಂದ ಇದು ಬೆಂಕಿ ನಂದಿಸಲು ತಕ್ಷಣದ ನೆರವಿಗೆ ಬಂದಿದೆ.

- Advertisement -

Related news

error: Content is protected !!