- Advertisement -
- Advertisement -
ಉಪ್ಪಿನಂಗಡಿ: ಗುಡ್ಡ ಕುಸಿದ ಪರಿಣಾಮ ಸರಳಿಕಟ್ಟೆಗೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಬಂದ್ ಆಗಿದೆ. ಹೀಗಾಗಿ ಅಜಿಲಮೊಗರು – ಸರಳಿಕಟ್ಟೆ – ಉಪ್ಪಿನಂಗಡಿ ಸಂಪರ್ಕ ಕಡಿತಗೊಂಡಿದೆ.
ಬಾರ್ಯ ಗ್ರಾಮದ ಪಂಜುಕ್ಕು ಎಂಬಲ್ಲಿ ಮಣಿಹಳ್ಳ – ಉಪ್ಪಿನಂಗಡಿ ಸಂಪರ್ಕ ಕಲ್ಪಿಸುವ ರಸ್ತೆಗೆ ಗುಡ್ಡ ಕುಸಿದು ಬಿದ್ದ ಕಾರಣ ಸಂಚಾರ ಸಂಪೂರ್ಣ ಬಂದ್ ಆಗಿದ್ದು, ಬದಲಿ ರಸ್ತೆಯನ್ನು ಪ್ರಯಾಣಿಕರು ಬಳಸುತ್ತಿದ್ದಾರೆ.
ಪಂಜುಕ್ಕು ಪ್ರಯಾಣಿಕರ ತಂಗುದಾಣದ ಬಳಿಯೇ ಈ ಘಟನೆ ನಡೆದಿದ್ದು, ಬಸ್ ನಿಲ್ದಾಣಕ್ಕೆ ಯಾವುದೇ ಹಾನಿಯಾಗಿಲ್ಲ. ಗುಡ್ಡ ಕುಸಿತದಿಂದ ವಿದ್ಯುತ್ ಕಂಬಗಳು ಧರೆಗುರುಳಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.
ಉಪ್ಪಿನಂಗಡಿ, ಪುತ್ತೂರು, ಬಿ.ಸಿರೋಡು ತೆರಳುವ ಪ್ರಯಾಣಿಕರು ಬದಲಿ ರಸ್ತೆ ಬಳಸುವಂತೆ ಸೂಚಿಸಲಾಗಿದೆ.
- Advertisement -