Sunday, July 19, 2026
spot_imgspot_img
spot_imgspot_img

ಉಪ್ಪಿನಂಗಡಿ: ರೋಡ್ ರೋಲರ್‌ ಹರಿದು ವ್ಯಕ್ತಿ ಮೃತ್ಯು..!

- Advertisement -
- Advertisement -

ಉಪ್ಪಿನಂಗಡಿ: ರಸ್ತೆ ಕಾಮಗಾರಿಯ ಸಂದರ್ಭ ರೋಡ್ ರೋಲರ್‌ನ ಅಡಿಗೆ ಬಿದ್ದು ವ್ಯಕ್ತಿಯೋರ್ವ ದಾರುಣವಾಗಿ ಸಾವನ್ನಪ್ಪಿದ ಘಟನೆ ಮೇ.9ರಂದು ಉಪ್ಪಿನಂಗಡಿಯ ಗಾಂಧಿಪಾರ್ಕ್ ಬಳಿ ನಡೆದಿದೆ.

ಇಲ್ಲಿನ ಚತುಷ್ಪಥ ರಾಷ್ಟ್ರೀಯ ಕಾಮಗಾರಿಯ ಹಿನ್ನೆಲೆಯಲ್ಲಿ ಸರ್ವೀಸ್ ರಸ್ತೆಯ ಕಾಮಗಾರಿ ನಡೆಯುತ್ತಿದ್ದು, ಈ ಸಂದರ್ಭ ವ್ಯಕ್ತಿಯೋರ್ವ ರಸ್ತೆ ಬದಿ ಮಲಗಿದ್ದ ಎನ್ನಲಾಗಿದೆ.

ಆತನ ಮೇಲೆ ರೋಡ್ ರೋಲರ್ ಚಲಿಸಿದ್ದು, ಸ್ಥಳದಲ್ಲೇ ಈತ ದಾರುಣವಾಗಿ ಸಾವನ್ನಪ್ಪಿದ್ದಾನೆ. ಅಪಘಾತದಿಂದಾಗಿ ಈತನ ದೇಹವಿಡೀ ಅಪ್ಪಚ್ಚಿಯಾಗಿದೆ. ಈತ ಉತ್ತರ ಭಾರತ ಮೂಲಕ ಕಾರ್ಮಿಕ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ ಎಂದು ವರದಿ ಮೂಲಕ ತಿಳಿದುಬಂದಿದೆ.

- Advertisement -

Related news

error: Content is protected !!