Friday, June 5, 2026
spot_imgspot_img
spot_imgspot_img

ಉಪ್ಪಿನಂಗಡಿ : ಮಹಿಳೆ ಜೊತೆ ಅಸಭ್ಯವಾಗಿ ವರ್ತಿಸಿ, ಹಲ್ಲೆ ಆರೋಪ; ಪ್ರಕರಣ ದಾಖಲು

- Advertisement -
- Advertisement -

ಉಪ್ಪಿನಂಗಡಿ : ಮಹಿಳೆ ಜೊತೆ ಅಸಭ್ಯವಾಗಿ ವರ್ತಿಸಿ, ಹಲ್ಲೆ ನಡೆಸಿರುವ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿ ಬಳಿ ನಡೆದಿದೆ.

ಮಹಿಳೆಯೋರ್ವರು ತಮ್ಮ ಪತಿಯೊಂದಿಗೆ ಪುತ್ತೂರು ಬಜತ್ತೂರು ಮಣಿಕ್ಕಲ ಎಂಬಲ್ಲಿ ಸಾರ್ವಜನಿಕ ರಸ್ತೆಯಲ್ಲಿ ಹೋಗುತ್ತಿದ್ದಾಗ ಸುರೇಶ, ಉಮೇಶ ಗಿರೀಶ ಹಾಗೂ ಇನ್ನೋರ್ವ ಬಂದು ಮಹಿಳೆಗೆ ಅವ್ಯಾಚವಾಗಿ ಬೈದು ಮರದ ಕೋಲಿನಿಂದ ಹಲ್ಲೆ ನಡೆಸಿದ್ದು, ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿರುತ್ತಾರೆ.

ಹಲ್ಲೆಯನ್ನು ತಡೆಯಲು ಬಂದ ಮಹಿಳೆಯ ಪತಿಗೂ ಹಲ್ಲೆ ನಡೆಸಿದ್ದು, ಹಲ್ಲೆಯಿಂದ ಗಾಯಗೊಂಡ ಮಹಿಳೆ ಹಾಗೂ ಅವರ ಪತಿ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

- Advertisement -

Related news

error: Content is protected !!