Monday, May 6, 2024
spot_imgspot_img
spot_imgspot_img

ಉಪ್ಪಿನಂಗಡಿ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯ ಜೊತೆ ಅನುಚಿತ ವರ್ತನೆ; ಪ್ರಕರಣ ದಾಖಲು..!

- Advertisement -G L Acharya panikkar
- Advertisement -

ಉಪ್ಪಿನಂಗಡಿ: ಯುವತಿಯೋರ್ವರು ಬೆಂಗಳೂರಿನಿಂದ ಊರಿಗೆ ಬಸ್ಸಿನಲ್ಲಿ ಪ್ರಯಾಣಿಸುತಿದ್ದ ವೇಳೆ ಪ್ರಯಾಣಿಕನೋರ್ವ ಅನುಚಿತವಾಗಿ ವರ್ತಿಸಿದ ಘಟನೆ ನಡೆದಿದೆ.

ಬೆಂಗಳೂರಿನಿಂದ ಅವರ ಫರಂಗಿಪೇಟೆ ನಿವಾಸಕ್ಕೆ ಬಸ್ಸಿನಲ್ಲಿ ಪ್ರಯಾಣಿಸುತ್ತಾ, ಬೆಳಿಗ್ಗಿನ ಜಾವ ಗುಂಡ್ಯ ಬಳಿ ತಲುಪುತ್ತಿದ್ದಂತೆ, ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಸಹಪ್ರಯಾಣಿಕನೋರ್ವ ಯುವತಿಯ ಜೊತೆ ಅನುಚಿತವಾಗಿ ವರ್ತಿಸಿರುತ್ತಾನೆ. ಈ ಬಗ್ಗೆ ಯುವತಿ ಉಪ್ಪಿನಂಗಡಿ ಠಾಣೆಯಲ್ಲಿ ನೀಡಿದ್ದು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

ರಾಜಕೀಯ ಲಾಭಕ್ಕಾಗಿ, ಕೆಲವು ಸಾಮಾಜಿಕ ಜಾಲತಾಣಗಳಲ್ಲಿ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಸುಳ್ಳುಸುದ್ದಿಗಳನ್ನು ಪ್ರಸಾರ ಮಾಡುತ್ತಿರುವುದು ಕಂಡುಬಂದಿದ್ದು, ಇದು ಚುನಾವಣಾ ನೀತಿಸಂಹಿತೆಯ ಉಲ್ಲಂಘನೆಯಾಗಿರುತ್ತದೆ ಹಾಗೂ ಇಂತಹ ಸುಳ್ಳುಸುದ್ದಿಗಳಿಂದ ಸಾಮಾಜಿಕ ಸ್ವಾಸ್ಥ್ಯವನ್ನು ಕೆಡಿಸುವುದರಿಂದ, ಅಂತಹ ಕಿಡಿಗೇಡಿಗಳ ವಿರುದ್ದವೂ ಸೂಕ್ತ ಕಾನುನುಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಯಾವುದೇ ಊಹಾಪೋಹಗಳಿಗೆ ಕಿವಿಗೊಡಬಾರದಾಗಿ ವಿನಂತಿ.

- Advertisement -

Related news

error: Content is protected !!