Sunday, June 14, 2026
spot_imgspot_img
spot_imgspot_img

ಉಪ್ಪಿನಂಗಡಿ: ನಿರ್ಮಾಣ ಹಂತದ ಕಟ್ಟಡದಲ್ಲಿ ಕಾರ್ಮಿಕನ ಕೊಲೆ ಪ್ರಕರಣ; ಆರೋಪಿಯ ಬಂಧನ..!

- Advertisement -
- Advertisement -

ಉಪ್ಪಿನಂಗಡಿ: ಉಪ್ಪಿನಂಗಡಿ ಬಸ್ ನಿಲ್ದಾಣದ ಬಳಿಯ ಗ್ರಾಮ ಪಂಚಾಯತ್ ಸ್ವಾಮ್ಯದ ನಿರ್ಮಾಣ ಹಂತದಲ್ಲಿರುವ ಗ್ರಂಥಾಲಯ ಕಟ್ಟಡದಲ್ಲಿ ಅಸ್ಸಾಂ ಮೂಲದ ಕಾರ್ಮಿಕ ದೀಪಕ್ ಬೆಂಗರ (34ವ.) ಎಂಬವರ ಕೊಲೆ ಪ್ರಕರಣದ ತನಿಖೆಯಲ್ಲಿ ಮಹತ್ವದ ಯಶಸ್ಸು ಸಾಧಿಸಿರುವ ಉಪ್ಪಿನಂಗಡಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಬೆಳ್ತಂಗಡಿ ತಾಲೂಕು ಕಲ್ಮಂಜ ಗ್ರಾಮದ ಕುಂಬ್ರಂಗೆ ಮನೆ ದಿ.ರವಿ ಮುಗೇರ ಎಂಬವರ ಮಗ ಬಾಬು ಯಾನೆ ರುದ್ರ (68) ಎಂದು ಗುರುತಿಸಲಾಗಿದೆ.

ಈತನನ್ನು ಉಳ್ಳಾಲ ತಾಲ್ಲೂಕಿನ ದೇರಳಕಟ್ಟೆ ಎಂಬಲ್ಲಿಂದ ವಶಕ್ಕೆ ಪಡೆದಿದ್ದು ಆರೋಪಿಯು ಕೃತ್ಯವೆಸಗಿದ ಬಗ್ಗೆ ತಪ್ಪೋಪ್ಪಿಗೆ ಹೇಳಿಕೆಯನ್ನು ನೀಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಆರೋಪಿಯ ಪತ್ತೆ ಕಾರ್ಯದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ ರಾಜೇಂದ್ರ ಡಿ.ಎಸ್, ಕೆ. ಎಸ್. ಪಿ. ಎಸ್ ರವರ ನಿರ್ದೇಶನದಂತೆ, ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಶ್ರೀ ಅರುಣ್ ಗೌಡರವರ ಮಾರ್ಗದರ್ಶನದಲ್ಲಿ, ಉಪ್ಪಿನಂಗಡಿ ವೃತ್ತ ನಿರೀಕ್ಷಕರಾದ ರವಿ ಬಿ. ಎಸ್ ರವರ ನೇತೃತ್ವದಲ್ಲಿ, ಉಪ್ಪಿನಂಗಡಿ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕರಾದ ಅವಿನಾಶ್ ಹೆಚ್, ಸಿಬ್ಬಂದಿಗಳಾದ ಶಿವರಾಮ್, ಹಿತೋಷ್, ಗಿರೀಶ್, ರಾಮಣ್ಣ ಗೌಡ, ಹೇಮರಾಜ್, ಮಹದೇವ, ನಾಗರಾಜ್, ಪುತ್ತೂರು ಗ್ರಾಮಾಂತರ ಠಾಣಾ ಸಿಬ್ಬಂದಿ ಪ್ರವೀಣ್ ರೈ ಬಂಟ್ವಾಳ ಗ್ರಾಮಾಂತರ ಠಾಣಾ ಸಿಬ್ಬಂದಿ ಹರಿಶ್ಚಂದ್ರ ಹಾಗೂ ತಾಂತ್ರಿಕ ವಿಭಾಗದ ಸಿಬ್ಬಂದಿ ದಿವಾಕರ್ ರವರುಗಳ ವಿಶೇಷ ತಂಡ ಕಾರ್ಯನಿರ್ವಹಿಸಿರುತ್ತಾರೆ.

- Advertisement -

Related news

error: Content is protected !!