Sunday, June 29, 2025
spot_imgspot_img
spot_imgspot_img

ಉಪ್ಪಿನಂಗಡಿ: ನೇಣು ಬಿಗಿದು ವಿದ್ಯಾರ್ಥಿ ಆತ್ಮಹತ್ಯೆ..!

- Advertisement -
- Advertisement -

ಉಪ್ಪಿನಂಗಡಿ: ಕಾಲೇಜು ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಉಪ್ಪಿನಂಗಡಿ ಗ್ರಾಮದ ಪರಿಯಡ್ಕ ನಿವಾಸಿ ಅತ್ತಾವುಲ್ಲಾ (22) ಎಂದು ಗುರುತಿಸಲಾಗಿದೆ.

ಅತ್ತಾವುಲ್ಲಾ ತಾಯಿಯೊಂದಿಗೆ ವಾಸವಾಗಿದ್ದು, ಮಡಂತ್ಯಾರಿನ ಕಾಲೇಜೊಂದರಲ್ಲಿ ದ್ವಿತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದರು. ಇತ್ತೀಚೆಗೆ ಒಂದೂವರೆ ತಿಂಗಳಿನಿಂದ ಕಾಲೇಜಿಗೆ ಹೋಗದೇ ಮನೆಯಲ್ಲಿದ್ದು ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಎನ್ನಲಾಗಿದೆ.

ಫೆ.14 ರಂದು ನೆರೆಮನೆಯ ಮೆಹಂದಿ ಕಾರ್ಯಕ್ರಮಕ್ಕೆ ಹೋಗಿ ವಾಪಾಸ್ಸು ಮನೆಗೆ ಬಂದಿದ್ದ ಅತ್ತಾವುಲ್ಲಾ ಕೋಣೆಯೊಳಗೆ ತೆರಳಿ ನೇಣು ಬಿಗಿದುಕೊಂಡಿದ್ದಾನೆ. ಜೀವನದಲ್ಲಿ ಜಿಗುಪ್ಸೆ ಹೊಂದಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮನೆಯವರು ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!