Friday, April 19, 2024
spot_imgspot_img
spot_imgspot_img

ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ಪ್ರಕರಣ-ಆರೋಪಿಯನ್ನು ಬಂಧಿಸಿದ ಪೊಲೀಸರು

- Advertisement -G L Acharya panikkar
- Advertisement -

ಉಪ್ಪಿನಂಗಡಿ: ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಳ್ಳತನಕ್ಕೆ ಸಂಬಂಧಿಸಿದಂತೆ ಆರೋಪಿಯೋರ್ವನನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.

ಉಪ್ಪಿನಂಗಡಿ ಪೇಟೆಯಲ್ಲಿರುವ ಉಲ್ಲಾಸ್ ಬಾರ್ ಮತ್ತು ರೆಸ್ಟೋರೆಂಟ್ ನ ಸಮೀಪದಲ್ಲಿನ ಸತೀಶ್ ಯಾನೆ ಲಕ್ಷ್ಮೀ ನಾರಾಯಣ ನಾಯಕ್ ಎಂಬವರ ಲಕ್ಷ್ಮೀ ಎಂಟರ್ ಪ್ರೈಸಸ್ ಜಿನಸು ಅಂಗಡಿಯಿಂದ, ದಿನಾಂಕ 10/11-12-2020 ರಾತ್ರಿ ಸಮಯದಲ್ಲಿ ಅಂಗಡಿಯ ಶಟರನ್ನು ಮುರಿದು ಒಳಪ್ರವೇಶಿಸಿದ ಕಳ್ಳರು ಕ್ಯಾಶ್ ಡ್ರಾವರಿನ ಬೀಗವನ್ನು ಮುರಿದು ಅದರಲ್ಲಿದ್ದ ಸುಮಾರು ಅಂದಾಜು ಒಟ್ಟು 45,000/- ರೂಪಾಯಿ ನಗದು ಹಣವನ್ನು ಕಳವು ಮಾಡಿಕೊಂಡು ಹೋಗಿದ್ದರು. ಅಲ್ಲದೇ ಕಳ್ಳರು ಸದ್ರಿ ಅಂಗಡಿಯ ಪಕ್ಕದಲ್ಲಿರುವ ಉಲ್ಲಾಸ್ ಬಾರ್ ಮತ್ತು ರೆಸ್ಟೋರೆಂಟಿನ ಹಿಂಭಾಗದ ಬಾಗಿಲಿನ ಚಿಲಕವನ್ನು ಕೂಡಾ ಮುರಿದು ಕಳ್ಳತನಕ್ಕೆ ಪ್ರಯತ್ನಿಸಿದ್ದರು. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.


ಇದೀಗ ಈ ಪ್ರಕರಣವನ್ನು ಭೇದಿಸಿದ ಉಪ್ಪಿನಂಗಡಿ ಪೊಲೀಸರು, ಠಾಣಾ ಪೊಲೀಸ್ ಉಪನಿರೀಕ್ಷಕರಾದ ಈರಯ್ಯ ಡಿ ಎನ್ ರವರ ನೇತೃತ್ವದಲ್ಲಿ ಅಪರಾಧ ಪತ್ತೆ ತಂಡವನ್ನು ರಚಿಸಿ ತನಿಖೆ ನಡೆಸಿ, ಈ ಪ್ರಕರಣದಲ್ಲಿ ಭಾಗಿಯಾದ ಆರೋಪಿ ಬೆಳ್ತಂಗಡಿ ತಾಲೂಕು, ಪಡಂಗಡಿ ಗ್ರಾಮ ನಿವಾಸಿ ಹಮೀದ್ ಯಾನೆ ಕುಂಞ ಮೋನು (46) ಎಂಬಾತನನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಮಾನ್ಯ ನ್ಯಾಯಾಲಯವು ಈತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಈ ಪ್ರಕರಣದಲ್ಲಿ ಭಾಗಿಯಾಗಿರುವ ಇನ್ನೋರ್ವ ಆರೋಪಿ ಬಂಟ್ವಾಳ ಸಜಿಪ ನಿವಾಸಿಯಾದ ಫಾರೂಕ್ ಯಾನೆ ಉಮ್ಮರ್ ಫಾರೂಕ್ ಎಂಬಾತನನ್ನು ಈಗಾಗಲೇ ವಿಟ್ಲ ಪೊಲೀಸರು ಠಾಣೆಯವರು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾದ ಕಳ್ಳತನ ಪ್ರಕರಣದಲ್ಲಿ ಬಂಧಿಸಿದ್ದು, ಪ್ರಸ್ತುತ ಈತ ನ್ಯಾಯಾಂಗ ಬಂಧನದಲ್ಲಿದ್ದಾನೆ.

ಈ ಪ್ರಕರಣದಲ್ಲಿ ಭಾಗಿಯಾದ ಹಮೀದ್ ಎಂಬಾತನ ಮೇಲೆ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ನಗರ, ಹಾಸನ, ಚಿಕ್ಕಮಗಳೂರು, ಉಡುಪಿ, ಕೊಡಗು ಜಿಲ್ಲೆಗಳಲ್ಲಿನ 15 ಪೊಲೀಸ್ ಠಾಣೆಗಳಲ್ಲಿ ಸುಮಾರು 30 ಕ್ಕಿಂತಲೂ ಹೆಚ್ಚಿನ ಕಳ್ಳತನಗಳ ಪ್ರಕರಣಗಳು ದಾಖಲಾಗಿದೆ.

ಸದ್ರಿ ಪ್ರಕರಣದ ಪತ್ತೆಯ ಕಾರ್ಯಾಚರಣೆಯಲ್ಲಿ ಮಾನ್ಯ ಪೊಲೀಸ್ ಅಧೀಕ್ಷಕರಾದ ಲಕ್ಷ್ಮಿ ಪ್ರಸಾದ್ ಹಾಗೂ ಪುತ್ತೂರು ಉಪ ವಿಭಾಗದ ಉಪಾಧೀಕ್ಷಕರಾದ ಗಾನ‌ ಪಿ‌ ಕುಮಾರ್ ರವರ ನಿರ್ದೇಶನದಲ್ಲಿ ಮತ್ತು ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕರಾದ ಉಮೇಶ್ ಉಪ್ಪಳಿಕೆ ರವರ ಮಾರ್ಗದರ್ಶನದಲ್ಲಿ ಉಪ್ಪಿನಂಗಡಿ ಠಾಣಾ ಪಿಎಸ್‌ಐ ಈರಯ್ಯ ಡಿ ಎನ್‌, ನೇತೃತ್ವದಲ್ಲಿ ಸಿಬ್ಬಂಧಿಗಳಾದ ಎಎಸ್‌ಐ ಚೋಮ ಎಂ ಪಿ , ಹರೀಶ್ಚಂದ್ರ, ಇರ್ಷಾದ್‌ ಪಿ, ಜಗದೀಶ್, ಪ್ರತಾಫ್ ಜಿಲ್ಲಾ ಗಣಕ ಯಂತ್ರದ ಸಿಬ್ಬಂದಿಗಳಾದ ದಿವಾಕರ ಮತ್ತು ಸಂಪತ್‌, ಚಾಲಕ ಕನಕರಾಜ್ ರವರುಗಳು ಭಾಗಿಯಾಗಿರುತ್ತಾರೆ.

- Advertisement -

Related news

error: Content is protected !!